ಮೇಕೆದಾಟು, ಕಾವೇರಿ ಹೋರಾಟಗಾರರ ಮೇಲಿನ ಕೇಸು ರದ್ದಿಗೆ ರಾಜ್ಯ ಸರ್ಕಾರ ನಿರ್ಧಾರ

Team Newsnap
1 Min Read
Mekedatu Dam

ಬೆಂಗಳೂರು : ಕಾವೇರಿ, ಮೇಕೆದಾಟು ಪಾದಯಾತ್ರೆ ಸೇರಿದಂತೆ ನಾಡಿನ ಹಿತರಕ್ಷಣೆಯ ಹೋರಾಟಗಳಲ್ಲಿ ಭಾಗವಹಿಸಿದ ಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ

ಮೇಕೆದಾಟು ಯೋಜನೆಯನ್ನು ಶೀಘ್ರ ಅನುಷ್ಠಾನಕ್ಕಾಗಿ ಒತ್ತಾಯಿಸಿ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಕೋವಿಡ್ ನಿಯಮ ಉಲ್ಲಂಘಿಸಿ ದಾಖಲಾದ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದನ್ನು ಓದು – ರಾಜ್ಯದಲ್ಲಿ 35 ಮಂದಿ ಇನ್ಸ್ ಪೆಕ್ಟರ್ ವರ್ಗಾವಣೆ

ಬೆಂಗಳೂರು ಸೇರಿದಂತೆ ಪಟ್ಟಣ, ನಗರಗಳಲ್ಲಿ ಕುಡಿಯುವ ನೀರಿನ ಬವಣೆ ನೀಗಿಸಲು ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಂದೋಲನದ ನೇತೃತ್ವ ವಹಿಸಿದ್ದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ಈ ಎಲ್ಲಾ ನಾಯಕರ ವಿರುದ್ಧ ರಾಮನಗರ ಜಿಲ್ಲೆಯ ಪೊಲೀಸ್ ಠಾಣೆಗಳಲ್ಲಿ ಎಫ್‌ಐಆರ್ ದಾಖಲಾಗಿದೆ.

WhatsApp Image 2022 07 10 at 1.59.01 PM

ಮಂಡ್ಯ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವಂತೆ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಪ್ರಕರಣಗಳಿಗೆ ಸಂಬಂಧಿಸಿದ ಕಡತಗಳನ್ನು ಸಂಪುಟ ಉಪಸಮಿತಿ ಮುಂದಿಟ್ಟು ಚರ್ಚೆ ನಡೆಸಿ ನಂತರ ರವಾನಿಸುವಂತೆ ಗೃಹ ಸಚಿವ ಜಿ.ಪರಮೇಶ್ವರ ಅವರಿಗೆ ಸೂಚಿಸಿದ್ದಾರೆ.

Share This Article
Leave a comment