ಎಸಿಬಿ ರದ್ದು : ಹೈಕೋರ್ಟ್ ತೀರ್ಪನ್ನು ಸುಪ್ರೀಂನಲ್ಲಿ ಪ್ರಶ್ನೆ ಮಾಡಲ್ಲ – ಸಿಎಂ ಬೊಮ್ಮಾಯಿ

Team Newsnap
1 Min Read
CM to lay foundation on 19th march for the construction of Ram mandir in Ramnagar ರಾಮನಗರದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮಾ. 19 ರಂದು ಸಿಎಂ ಶಂಕುಸ್ಥಾಪನೆ

ಕರ್ನಾಟಕ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದು ಸಂಬಂಧ ಹೈಕೋರ್ಟ್‌ ಆದೇಶ ಪಾಲಿಸುತ್ತೇವೆಯೇ ಹೊರತು ಸುಪ್ರೀಂ ಕೋರ್ಟ್‌ ಗೆ ಮೊರೆ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ಎಸಿಬಿ ರದ್ದು ಸಂಬಂಧ ಹೈಕೋರ್ಟ್‌ ಆದೇಶ ಪಾಲಿಸುತ್ತೇವೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನು ಓದಿ – ಕಷ್ಟಗಳಿಗೆ ಹೆದರಿ ಮಗು ಕೊಂದು ಅತ್ಮಹತ್ಯೆಗೆ ಯತ್ನಿಸಿದ ತಾಯಿಯ ಸ್ಥಿತಿ ಗಂಭೀರ

ಎಸಿಬಿ ವಿಚಾರವಾಗಿ ಹೈಕೋರ್ಟ್ ಆದೇಶ ಪಾಲನೆ ಪ್ರಕ್ರಿಯೆ ಆರಂಭ ಆಗಿದೆ. ಸರ್ಕಾರದಿಂದ ಸುಪ್ರೀಂ ಮೊರೆ ಹೋಗಿಲ್ಲ. ಖಾಸಗಿ ವ್ಯಕ್ತಿ ಮೇಲ್ಮನವಿ ಹೋಗಿರೋದಕ್ಕೂ ನಮಗೂ ಸಂಬಂಧ ಇಲ್ಲ ಎಂದು ಹೇಳಿದ್ದಾರೆ.

ನಾವು ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿಗೆ ಬದ್ಧರಾಗಿದ್ದೇವೆ. ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಹೋಗದಿರಲು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಿದ್ದೇವೆ. ಅದಕ್ಕೆ ನಾವು ಬದ್ಧವಾಗಿದ್ದೇವೆ.

Share This Article
Leave a comment