ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಖಾಸಗಿ ಅರ್ಜಿ ಸಲ್ಲಿಸಲಾಗಿದೆ.
ಕನಕರಾಜು ಎಂಬವರು ಖಾಸಗಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಈ ಅರ್ಜಿಯನ್ನು ವಿಚಾರಣೆಗೆ ಲಿಸ್ಟ್ ಮಾಡಲು ಮುಖ್ಯ ನ್ಯಾಯಧೀಶ ರಮಣ ಸೂಚಿಸಿದ್ದಾರೆ.
ಇಬ್ಬರು ಬೆಸ್ಕಾಂ ಅಧಿಕಾರಿಗಳ ವಿರುದ್ಧ ಲಂಚ ಕೇಳಿದ್ದ ಆರೋಪ ಮಾಡಿ ಕನಕರಾಜು ದೂರು ಸಲ್ಲಿಸಿದ್ದರು. ದೂರಿನ ವಿಚಾರಣೆ ನಡೆಯುತ್ತಿದ್ದಾಗ ಎಸಿಬಿಯನ್ನು ರದ್ದುಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಎಸಿಬಿ ರದ್ದು ಮಾಡಿರುವುದು ತಪ್ಪು. ಕೇಸುಗಳ ತನಿಖೆ ಮೇಲೆ ದುಷ್ಪರಿಣಾಮ ಬೀರುತ್ತದೆ. ಹೀಗಾಗಿ ಹೈಕೋರ್ಟ್ ತೀರ್ಪಿಗೆ ತಡೆ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಈ ಮೇಲ್ಮನವಿ ಅರ್ಜಿಯನ್ನು ಕರ್ನಾಟಕ ಸರ್ಕಾರ ಸಲ್ಲಿಸಿಲ್ಲ. ಈ ಹಿಂದೆ ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ ಎಸಿಬಿಯನ್ನು ರದ್ದುಗೊಳಿಸುವುದಾಗಿ ಕರ್ನಾಟಕ ಬಿಜೆಪಿ ಹೇಳಿತ್ತು. ಹೀಗಾಗಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುತ್ತಾ ಎಂಬ ಪ್ರಶ್ನೆ ಎದ್ದಿತ್ತು. ಆದರೆ ಈಗ ಖಾಸಗಿ ವ್ಯಕ್ತಿ ಸಲ್ಲಿಸಿದ ಕಾರಣ ಎಸಿಬಿಯಲ್ಲಿ ನಡೆಯುತ್ತಿರುವ ಪ್ರಕರಣಗಳ ಭವಿಷ್ಯ ಮುಂದಿನ ಸುಪ್ರೀಂ ಆದೇಶದ ಮೇಲೆ ನಿಂತಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ