December 24, 2024

Newsnap Kannada

The World at your finger tips!

teacher, learning, school

ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆ ರದ್ದು

Spread the love

ರಾಜ್ಯದ 6 ಎಂಜಿನಿಯರಿಂಗ್ ಕಾಲೇಜುಗಳ ಮಾನ್ಯತೆಯನ್ನು ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ರದ್ದು ಮಾಡಿದೆ.

2021 -22ನೇ ಸಾಲಿನಿಂದ ಈ ಕಾಲೇಜುಗಳನ್ನು ಮುಚ್ಚಲು ಸೂಚಿಸಲಾಗಿದೆ.

ವಿಟಿಯು ಈ ಕುರಿತಂತೆ ಪ್ರಕಟಣೆ ಹೊರಡಿಸಿ, ರದ್ದು ಮಾಡಿರುವ ಕಾಲೇಜು ಗಳ‌ ವಿವರ ನೀಡಿದೆ.‌

  • ಅಲ್ಫಾ ಕಾಲೇಜ್ ಆಫ್ ಎಂಜಿನಿಯರಿಂಗ್, ಬೆಂಗಳೂರು
  • ಶೇಖ್ ಕಾಲೇಜ್ ಆಫ್ ಎಂಜಿನಿಯರಿಂಗ್, ಬೆಳಗಾವಿ
  • ಇಸ್ಲಾಮಿಯಾ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಬೆಂಗಳೂರು
  • ಏಕಲವ್ಯ ಇನ್ ಸ್ಟಿಟ್ಟೂಟ್ ಆಫ್ ಟೆಕ್ನಾಲಜಿ, ಚಾಮರಾಜ ನಗರ
  • ಶ್ರೀ ವಿನಾಯಕ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಕೆಜಿಎಫ್
  • ಬಿಟಿಎಲ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಆ್ಯಂಡ್ ಮ್ಯಾನೇಜ್ ಮೆಂಟ್ ಬೆಂಗಳೂರು

ಮಾನ್ಯತೆ ರದ್ದಾದ ಈ ಕಾಲೇಜುಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಬೇರೆ ಕಾಲೇಜುಗಳಲ್ಲಿ ಪ್ರವೇಶ ನೀಡಲಾಗುವುದು. ಈ ಕುರಿತು ಪ್ರತ್ಯೇಕ ಪ್ರಕಟಣೆ ಹೊರಡಿಸಲಾಗುವುದು.

ರದ್ದಾಗಿರುವ ಈ ಕಾಲೇಜುಗಳಲ್ಲಿ ಪ್ರವೇಶ ಮುಂದುವರಿಸಿದರೆ ಅದಕ್ಕೆ ವಿಟಿಯು ಜವಾಬ್ದಾರವಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Copyright © All rights reserved Newsnap | Newsever by AF themes.
error: Content is protected !!