ಸಿಇಟಿ ರ್ಯಾಂಕ್ ಪಟ್ಟಿ ರದ್ದು : ಹೈಕೋರ್ಟ್ ಮಹತ್ವದ ಆದೇಶ

Team Newsnap
1 Min Read
shock for Congress: High Court order to cancel ACB - Lokyukta gets power again

2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ RANKING ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (KEA) ಹೈಕೋರ್ಟ್ ನಿರ್ದೇಶನ ನೀಡಿದೆ.

ಮರುಪರೀಕ್ಷೆ ಬರೆದ ಅಭ್ಯರ್ಥಿಗಳ ಪ್ರಸಕ್ತ ಸಾಲಿನ ಸಿಇಟಿ ಅಂಕಗಳ ಜೊತೆಗೆ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ತಿಳಿಸಿದೆ.

ಮುರುಘಾಶ್ರೀಗೆ ಮತ್ತೊಂದು ಶಾಕ್. ಬವಸ ಭೂಷಣ , ಬವಸ ಶ್ರೀ ಪ್ರಶಸ್ತಿ ವಾಪಸ್ಸಾತಿಗೆ ಅಭಿಯಾನ ಆರಂಭ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 30 ರಂದು ಹೊರಡಿಸಲಾಗಿದ್ದ 2021-22 ರ ಸಿಟಿಟಿ ಫಲಿತಾಂಶವನ್ನು ರದ್ದುಪಡಿಸಿರುವ ಹೈಕೋರ್ಟ್, ಕೋರ್ಸ್ ಗಳ ಪ್ರವೇಶಾತಿಗೆ ಸಿಇಟಿ ಮರು ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳ ಪಿಯುಸಿ ಪರೀಕ್ಷೆಯ ಶೇ. 50 ಅಂಕ ಹಾಗೂ ಸಿಇಟಿಯಲ್ಲಿ ಪಡೆದಿರುವ ಶೇ. 50 ಅಂಕ ಪರಿಗಣಿಸಿ ಹೊಸ ರ್ಯಾಂಕ್ ಪಟ್ಟಿ ಪ್ರಕಟಿಸುವಂತೆ ಆದೇಶಿಸಿದೆ.

2020-21ನೇ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳು ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು 2022ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸುವುದಿಲ್ಲ ಎಂದಿದ್ದ ಕೆಇಎ ಆದೇಶ ಪ್ರಶ್ನಿಸಿ ಚಿಕ್ಕಮಗಳೂರಿನ ಆರ್‌ ಈಶ್ವರ್‌ ಸೇರಿದಂತೆ ಹಲವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಒಟ್ಟು ಏಳು ಮನವಿಗಳ ವಿಚಾರಣೆಯನ್ನು ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್‌ ಆರ್‌ ಕೃಷ್ಣ ಕುಮಾರ್‌ ಅವರ ನೇತೃತ್ವದ ಏಕಸದಸ್ಯ ಪೀಠವು ಪ್ರಕಟಿಸಿತು.

Share This Article
Leave a comment