ಇಂದು ರಾತ್ರಿಯಿಂದಲೇ ರದ್ದಾದ ನೈಟ್ ಕರ್ಫ್ಯೂ – ಸಿ ಎಂ ಪ್ರಕಟಣೆ

Team Newsnap
1 Min Read

ಇಂದು ರಾತ್ರಿಯಿಂದಲೇ ಜಾರಿ ಆಗಬೇಕಿದ್ದ ನೈಟ್ ಕಫ್ಯೂ ೯ ಅನ್ನು ಕೊನೆಗೂ ರಾಜ್ಯ ಸರ್ಕಾರ ರದ್ದು ಮಾಡಿದೆ.

ನೈಟ್ ಕರ್ಫ್ಯೂ ಬಗ್ಗೆ ಸಾರ್ವಜನಿಕ ವಲಯದಿಂದ ಸಾಕಷ್ಟು ಟೀಕೆಗಳು ಬಂದ ಬೆನ್ನಲ್ಲೇ ಸರ್ಕಾರ ನೈಟ್ ಕರ್ಫ್ಯೂ ಜಾರಿ ಆದೇಶವನ್ನು ವಾಪಸ್ ಪಡೆದಿದೆ.

ಕಳೆದ ಎರಡು ದಿನಗಳಿಂದ ನೈಟ್ ಕರ್ಫೂ ಬಗ್ಗೆ ಸಾಕಷ್ಟು ಗೊಂದಲದ ಆದೇಶ ಹೊರಡಿಸಿ ಸಾರ್ವಜನಿಕರ ಟೀಕೆಗೆ ಗುರಿಯಾಗಿ ಒಂದೇ ದಿನಕ್ಕೆ ನೈಟ್ ಕರ್ಫ್ಯೂ ವಾಪಸ್ ಪಡೆದಿರುವ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಪ್ರಕಟಣೆಯಲ್ಲಿ ಹೇಳಿದ್ದಾರೆ.

ರೂಪಾಂತರ ಹೊಂದಿದ ಕೋವಿಡ್ ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸುವ ಉದ್ದೇಶದಿಂದ ತಜ್ಞರ ಸಲಹೆಯ ಮೇರೆಗೆ ರಾತ್ರಿ ಕಫ್ರ್ಯೂವನ್ನು ಜಾರಿಗೆ ತರಲು ತೀರ್ಮಾನಿಸಲಾಗಿತ್ತು.

ಸರ್ಕಾರದ ಈ ತೀರ್ಮಾನದ ಕುರಿತಾಗಿ ಸಾರ್ವಜನಿಕ ವಲಯದಲ್ಲಿ ರಾತ್ರಿ ಕರ್ಫ್ಯೂ ಅಗತ್ಯವಿಲ್ಲ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಮರು ಪರಿಶೀಲಿಸಿ, ಸಂಪುಟ ಸಹೋದ್ಯೋಗಿಗಳ ಹಾಗೂ ಹಿರಿಯ ಅಧಿಕಾರಿಗಳ ಅಭಿಪ್ರಾಯದ ಮೇರೆಗೆ ರಾತ್ರಿ ಕರ್ಫ್ಯೂವನ್ನು ಹಿಂಪಡೆಯಲು ತೀರ್ಮಾನಿಸಲಾಗಿದೆ.

ಸಾರ್ವಜನಿಕರು ಸ್ವಯಂ ನಿರ್ಭಂಧ ವಿಧಿಸಿಕೊಂಡು, ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು, ಅನಗತ್ಯವಾಗಿ ಸಂಚರಿಸದಂತೆ ಹಾಗೂ ಸರ್ಕಾರ ವಿಧಿಸಿದ ಕೋವಿಡ್ ನಿಯಂತ್ರಣ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದರ ಮೂಲಕ ಈ ವೈರಾಣುವಿನ ಹರಡುವಿಕೆ ತಡೆಯಲು ಕೋರಿದೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

Share This Article
Leave a comment