ದೆಹಲಿಯಲ್ಲಿ ಜನವರಿ 1ಕ್ಕೆ 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿ ರದ್ದು

Team Newsnap
1 Min Read

ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯಕ್ಕೆ ಮಿತಿ ಹೇರಲು ಮುಂದಾಗಿರುವ ದೆಹಲಿ ಸರ್ಕಾರ ದೆಹಲಿಯಲ್ಲಿ ಜನವರಿ 1ಕ್ಕೆ 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿ ರದ್ದು ಮಾಡಲು ನಿರ್ಧಾರ ಮಾಡಿದೆ.

ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (NGT)ಯ ನಿರ್ದೇಶನದ ಪ್ರಕಾರ, ದೆಹಲಿ ಸರ್ಕಾರ ಜನವರಿ 1, 2022 ರಂದು 10 ವರ್ಷ ಪೂರೈಸುವ ಎಲ್ಲಾ ಡೀಸೆಲ್ ವಾಹನಗಳ ನೋಂದಣಿಯನ್ನು ರದ್ದುಗೊಳಿಸಲು ತಯಾರಿ ನಡೆಸಿದೆ.

ಆದರೆ ಈ ವಾಹನಗಳಿಗೆ ನಿರಾಕ್ಷೇಪಣಾ ಪ್ರಮಾಣ ಪತ್ರ (NOC) ನೀಡಲು ಸಾರಿಗೆ ಇಲಾಖೆ ಮುಂದಾಗಿದೆ. ಹಾಗಾಗಿ ಈ ವಾಹನಗಳನ್ನು ಬೇರೆ ಕಡೆಗಳಲ್ಲಿ ನೋಂದಣಿ ಮಾಡಿಕೊಂಡು ಬಳಸಬಹುದಾಗಿದೆ.

2016ರಲ್ಲೇ ಎನ್‍ಜಿಟಿ ತನ್ನ ಆದೇಶದಲ್ಲಿ ದೆಹಲಿಯಲ್ಲಿ 10 ವರ್ಷಕ್ಕಿಂತ ಹಳೆಯದಾದ ಡೀಸೆಲ್ ವಾಹನಗಳು ಮತ್ತು 15 ವರ್ಷಕ್ಕಿಂತ ಹಳೆಯದಾದ ಪೆಟ್ರೋಲ್ ವಾಹನಗಳ ನೋಂದಣಿ ಮತ್ತು ಓಡಾಟದ ಮೇಲಿನ ನಿರ್ಬಂಧಗಳಿಗೆ ಸಂಬಂಧಿಸಿದಂತೆ ನಿರ್ದೇಶನಗಳನ್ನು ನೀಡಿದೆ.

Share This Article
Leave a comment