ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಜೊತೆಗಿನ ವೈಮನಸ್ಸಿನಿಂದ ಬೇಸತ್ತಿರುವ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಶನಿವಾರ ಕೊನೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್ ಅವರಿಗೆ ರಾಜಿನಾಮೆ ಪತ್ರ ನೀಡಿದರು.
ನವಜೋತ್ ಸಿಂಗ್ರನ್ನ ಇತ್ತೀಚೆಗೆ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ನಂತರ ನವಜೋತ್ ಸಿಂಗ್ರನ್ನ ಅಧ್ಯಕ್ಷ ಸ್ಥಾನದಲ್ಲಿ ನೋಡುವುದು ಕ್ಯಾಪ್ಟನ್ ಅಮರಿಂದರ್ ಸಿಂಗ್ಗೆ ಇಷ್ಟವಿರಲಿಲ್ಲ ಎನ್ನಲಾಗಿತ್ತು.
ತಮ್ಮನ್ನು ಪಕ್ಷದಲ್ಲಿ ಸೈಡ್ಲೈನ್ ಮಾಡಲಾಗುತ್ತಿದೆ ಎನ್ನುವುದು ಕ್ಯಾಪ್ಟನ್ ಅಮರಿಂದರ್ ಸಿಂಗ್ ವಾದ.
ಇಂದು ನಡೆದ ಒಂದಿಷ್ಟು ಕ್ಷಿಪ್ರ ರಾಜಕೀಯ ಬೆಳವಣಿಗೆಗಳ ಮಧ್ಯೆ ಸೋನಿಯಾ ಗಾಂಧಿಗೆ ಕರೆ ಮಾಡಿ ಮಾತನಾಡಿರುವ ಕ್ಯಾಪ್ಟನ್ ಅಮರಿಂದರ್ ಪಕ್ಷದಲ್ಲಿ ನನ್ನನ್ನು ಸೈಡ್ಲೈನ್ ಮಾಡಿದ್ರೆ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತೇನೆ ಎಂದಿದ್ದರು ಅಂತಾ ವರದಿಯಾಗಿತ್ತು.
ಈ ನಡುವೆ ಬಿಜೆಪಿ ಉತ್ತರಖಾಂಡ್, ಕರ್ನಾಟಕ ಹಾಗೂ ಗುಜರಾತ್ ನಲ್ಲಿ ಮುಖ್ಯ ಮಂತ್ರಿಗಳನ್ನು ಬದಲಾವಣೆ ಮಾಡಿದ ಸೂತ್ರವನ್ನೇ ಕಾಂಗ್ರೆಸ್ ಅನುಸರಿಸಿದಂತೆ ಕಾಣುತ್ತದೆ. ಹೀಗಾಗಿ ಪಂಜಾಬ್ ನಲ್ಲಿ ಯುವ ನಾಯಕನನ್ನು ಸಿಎಂ ಆಗಿ ನೇಮಕ ಮಾಡುವ ಸಾಧ್ಯತೆ ಇದೆ.
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
- ಹಾಲಿನ ದರ ಏರಿಕೆ? ಶೀಘ್ರದಲ್ಲೇ ಕೆಎಂಎಫ್ ನಿರ್ಣಯ
- ಮೈಸೂರಿನ ಪ್ರಿನ್ಸೆಸ್ ರಸ್ತೆಗೆ ಸಿದ್ದರಾಮಯ್ಯ ಹೆಸರು: ಪ್ರತಾಪ್ ಸಿಂಹ-ಯದುವೀರ್ ನಡುವೆ ವಾಕ್ಸಮರ
- ವಾರಕ್ಕೆ 70 ಗಂಟೆ ಕೆಲಸದ ಮೇಲೆ ಉದ್ಯಮಿ ನಮಿತಾ ಥಾಪರ್ ಪ್ರತಿಕ್ರಿಯೆ
- ಸಿಲಿಂಡರ್ ಸ್ಫೋಟ ಪ್ರಕರಣ: ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ದುರ್ಮರಣ
More Stories
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
ಮೈಸೂರಿನ ಪ್ರಮುಖ ರಸ್ತೆಗೆ ಸಿಎಂ ಸಿದ್ದರಾಮಯ್ಯ ಹೆಸರು: ಪಾಲಿಕೆ ತೀರ್ಮಾನಕ್ಕೆ ಆಕ್ಷೇಪಣೆಗಳು
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ