ಚಿತ್ರದುರ್ಗ ಬಳಿ ಲಾರಿಗೆ ಕಾರು ಡಿಕ್ಕಿ: ಒಂದೇ ಕುಟುಂಬದ ನಾಲ್ವರು ಬಲಿ – ಮೂವರಿಗೆ ಗಾಯ

Team Newsnap
1 Min Read

ಚಿತ್ರದುರ್ಗ ಬಳಿ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬಸವನಬಾಗೇವಾಡಿಯ ಒಂದೇ ಕುಟುಂಬದ ನಾಲ್ವರು ಬಲಿಯಾಗಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ

ಭಾನುವಾರ ಬೆಳಿಗ್ಗೆ ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಈ ಘಟನೆ ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿ 13 ರ ಮಲ್ಲಾಪುರ ಗ್ರಾಮದ ಬಳಿ ನಡೆದಿದೆ. ಮೃತಪಟ್ಟವರು ವಿಜಾಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಕುದುರಿ ಸಾಲವಡಗಿ ಗ್ರಾಮದವರಾಗಿದ್ದಾರೆ.

ಖಾಸಗಿ ಬ್ಯಾಂಕ್ ನೌಕರ ಸಂಗನಬಸವ (36), ಪತ್ನಿ ರೇಖಾ(29), ಪುತ್ರ ಅಗಸ್ತ್ಯ(7), ಸಂಬಂಧಿ ಭೀಮಾಶಂಕರ್ (26) ಮೃತ ದುರ್ದೈವಿಗಳು. ಮದ್ದೂರಿನಲ್ಲಿ ಜೆಡಿಎಸ್ ಮುಖಂಡ ಅಪ್ಪು ಗೌಡನ ಮೇಲೆ ಮಾರಣಾಂತಿಕ ಹಲ್ಲೆ : ಪ್ರಾಣಾಪಾಯದಿಂದ ಪಾರು

ಮೃತ ದಂಪತಿಯ ಮತ್ತೋರ್ವ ಪುತ್ರ ಆದರ್ಶ (3) ಹಾಗೂ ಪುತ್ರಿ ಅನ್ವಿಕಾ (5) ಮತ್ತು ಕಾರು ಚಾಲಕನಿಗೆ ಗಂಭೀರವಾಗಿ ಗಾಯಗಳಾಗಿವೆ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಾರಿನಲ್ಲಿ ಚಿಕ್ಕಮಗಳೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದರು. ನಸುಕಿನ ಜಾವ 3:30ಕ್ಕೆ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ.

ಸ್ಥಳಕ್ಕೆ ಎಸ್ಪಿ ಪರುಶುರಾಮ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share This Article
Leave a comment