ರೈತ ಮುಖಂಡ ಡಾ. ವಿಜಯಾನಂದ ಸ್ವಾಮಿ ಅವರಿಗೆ ಸೇರಿದ ಕಾರು ಬೆಳಗಿನ ಜಾವ ಬೆಂಕಿಗಾಹುತಿಯಾಗಿದೆ. ಇದನ್ನು ಓದಿ – ಬೀದರ್-ಬೆಂಗಳೂರು ಮಧ್ಯೆ ಸಂಚರಿಸಲಿದೆ ಏರ್ ವಿಮಾನ
ಶ್ರೀ ರಾಘವೇಂದ್ರ ಸ್ವಾಮಿ ದರ್ಶನಕ್ಕಾಗಿ ಮಂತ್ರಾಲಯಕ್ಕೆ ಹೋಗಲು ಬೆಂಗಳೂರಿನಿಂದ ರಾಯಚೂರಿನ ಮಡ್ಡಿಪೇಟೆಯಲ್ಲಿರುವ ಸಹೋದರನ ಮನೆಗೆ ಬಂದಿದ್ದರು.
ಮನೆ ಹೊರಗೆ ಪಾರ್ಕ್ ಮಾಡಿದ್ದ ಕಾರು ಬೆಳಗಾಗುವಷ್ಟರಲ್ಲಿ ಸುಟ್ಟು ಕರಕಲಾಗಿದೆ. ತಿಪ್ಪೆಗೆ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ ಕಾರಿಗೆ ತಗುಲಿರಬಹುದು ಅಂತ ಶಂಕಿಸಲಾಗಿದೆ. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಸತತ ಅರ್ಧ ಗಂಟೆಕಾಲ ಬೆಂಕಿ ನಂದಿಸಿದೆ.
ನೇತಾಜಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು