May 22, 2022

Newsnap Kannada

The World at your finger tips!

bike car

ಚಿಕ್ಕಮಗಳೂರು ಬಳಿ ಕಾರು-ಬೈಕ್ ಡಿಕ್ಕಿ : ಧರ್ಮಸ್ಥಳಕ್ಕೆ ಹೊರಟಿದ್ದ ದಂಪತಿ ಸಾವು

Spread the love

ಕಾರು-ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದಂಪತಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ನಗರದ ದಂಟರಮಕ್ಕಿ ಕೆರೆ ಏರಿ ಬಳಿ ನಡೆದಿದೆ.

ಆನಂದ್(35) ಹಾಗೂ ಲಕ್ಷ್ಮಿ(33) ಮೃತ ದುರ್ದೈವಿಗಳು

ಮೃತರು ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬೀರೂರು ಸಮೀಪದ ಕಾರೇಹಳ್ಳಿ ಮೂಲದವರು.

ಇಂದು ಬೆಳಗ್ಗೆ ಬೈಕಿನಲ್ಲಿ ಧರ್ಮಸ್ಥಳಕ್ಕೆ ಹೋಗುವಾಗ ಈ ದುರ್ಘಟನೆ ಸಂಭವಿಸಿದೆ.

ಬೈಕ್-ಕಾರು ಮುಖಾಮುಖಿ ಡಿಕ್ಕಿಯಾದ ರಭಸಕ್ಕೆ ಬೈಕ್ ರಸ್ತೆ ಬದಿಯ ಕಂದಕಕ್ಕೆ ಉರುಳಿ ಬಿದ್ದಿದೆ. ಕಂದಕಕ್ಕೆ ಬಿದ್ದ ಬೈಕಿಗೆ ಬೆಂಕಿ ಹೊತ್ತಿದ ಪರಿಣಾಮ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದೆ.

ಬೈಕ್ ಜೊತೆಯೇ ಕಂದಕಕ್ಕೆ ಬಿದ್ದ ಬೈಕ್ ಸವಾರ ಆನಂದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ತೀವ್ರ ಗಾಯವಾಗಿದ್ದ ಮೃತ ಆನಂದ್ ಪತ್ನಿ ಲಕ್ಷ್ಮಿ ಅವರನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಅವರು ಕೂಡ ಸಾವನ್ನಪ್ಪಿದ್ದಾರೆ.

ಚಿಕ್ಕಮಗಳೂರಿನ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!