April 11, 2026

Newsnap Kannada

The World at your finger tips!

police 1

ಲಾರಿಗೆ ಕಾರು ಡಿಕ್ಕಿ – ಬೆಂಗಳೂರಿನ ಗಾರ್ಡನ್ ಸಿಟಿ ಕಾಲೇಜಿನ ವಿದ್ಯಾರ್ಥಿಗಳ ದುರಂತ ಸಾವು

Spread the love

ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಗಳೂರಿನ ಗಾರ್ಡನ್ ಸಿಟಿ ಕಾಲೇಜಿನ ನಾಲ್ವರು ದುರಂತ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಟ್ಟೂರು ಗೇಟ್ ಬಳಿ ಸಂಭವಿಸಿದೆ.

ವೈಷ್ಣವಿ, ಭರತ್ , ಸಿರಿಲ್ , ವೆಂಕಟ್ ಎಂಬುವವರೇ ಸಾವನ್ನಪ್ಪಿದ್ದಾರೆ.

ಹೊಸಕೋಟೆ ಬಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವೇಗವಾಗಿ ಬಂದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ನಂತರ ಎದುರಿನಿಂದ ಬಂದ ಲಾರಿಗೆ ಭೀಕರವಾಗಿ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ.

ಹೊಸಕೋಟೆ ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

error: Content is protected !!