ಮಂಡ್ಯ: ಕೆಎಸ್ಆರ್ಟಿಸಿ ಬಸ್‌ಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ನಾಲ್ವರು ದುರಂತ ಸಾವಿಗೀಡಾಗಿರುವ ಘಟನೆ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ಜರುಗಿದೆ.
ಮೃತರನ್ನು ಬೆಂಗಳೂರಿನ ಬೆಂಡಿಗನಹಳ್ಳಿಯ ನಮಿತಾ, ಬೆಂಗಳೂರಿನಲ್ಲಿ ವಾಸವಿದ್ದ ರಾಜಸ್ಥಾನ ಮೂಲದ ಪಂಕಜ್ ಶರ್ಮಾ, ಬೆಂಗಳೂರಿನ ವಂಶಿಕೃಷ್ಣ ಹಾಗೂ ಧಾರವಾಡದ ರಘುನಾಥ್ ಭಜಂತ್ರಿ ಎಂದು ಗುರುತಿಸಲಾಗಿದೆ.
ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ನಡೆದ ಈ ಘಟನೆಯಲ್ಲಿ ಹಾಸನ ಕಡೆಯಿಂದ ಬರುತ್ತಿದ್ದ ಶಿಫ್ಟ್ ಕಾರು, ಮುಂದೆ ಹೋಗುತ್ತಿದ್ದ ಸಾರಿಗೆ ಬಸ್‌ಗೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
ಅತಿಯಾದ ವೇಗವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ಳೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು