ಮಂಡ್ಯದಲ್ಲಿ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಹೊತ್ತಿ ಉರಿದ ಕಾರು

Team Newsnap
1 Min Read

ಮಂಡ್ಯ ಜಿಲ್ಲೆಯ ಬೆಳ್ಳೂರು ಸಮೀಪದಲ್ಲಿ ಚಾಲಕ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿ ಕಾರು ನಜ್ಜುಗುಜ್ಜಾಗಿದೆ ಕ್ಷಣಾರ್ಧದಲ್ಲೇ ಹೊತ್ತಿ ಉರಿದಿದೆ.

ಬೆಳ್ಳೂರು ಸಮೀಪದ ನಲ್ಲಿಗೆರೆ ಬಳಿಯಲ್ಲಿ ಬೆಂಗಳೂರಿನಿಂದ ಹಾಸನಕ್ಕೆ ತೆರಳುತ್ತಿದ್ದ ಹೊಂಡಾ ಸಿಟಿ ಕಾರು, ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದಾಗಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ.

ಇದರನ್ನು ಗಮನಸಿದ ಸ್ಥಳೀಯರು ಕಾರಿನಲ್ಲಿದ್ದಂತವರನ್ನು ಹೊರಗೆಳೆದು ರಕ್ಷಿಸಿದ್ದಾರೆ. ಈ ಬಳಿಕ ಕ್ಷಣಾರ್ಧದಲ್ಲೇ ರಸ್ತೆಯಲ್ಲಿ ಕಾರು ಹೊತ್ತಿ ಉರಿದರೂ, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ, ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a comment