ಶಾಸಕರ ಗುರುತಿನ ಚೀಟಿ ಅಂಟಿಸಿದ್ದ ಕಾರಿನ ಗ್ಲಾಸ್ ಒಡೆದು ಖದೀಮರು
4ಲಕ್ಷ ರು. ಕಳ್ಳತನ ಮಾಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿಯ ಮಲ್ಲಿಕಾರ್ಜುನ ಚಿತ್ರಮಂದಿರ ಬಳಿ ಸೋಮವಾರ ನಡೆದಿದೆ.
ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ್ ದಡೇಸೂಗುರು ಗುರುತಿನ ಚೀಟಿ ಇದ್ದ ಕಾರಿನ ಗ್ಲಾಸ್ ಒಡೆದು 4 ಲಕ್ಷ ರು. ಹಣವನ್ನು ಖದೀಮರು ದೋಚಿದ್ದಾರೆ. ಆದರೆ ಈ ಕಾರು ಶಾಸಕರ ಬೆಂಬಲಿಗ ಡಾಂಬರ್ ಗೋವಿಂದ್ ಎಂಬವರಿಗೆ ಸೇರಿದ್ದು. , ಶಾಸಕರ ಗುರುತಿನ ಚೀಟಿಯನ್ನು ಅಂಟಿಸಿಕೊಂಡು ಓಡಾಡುತ್ತಿದ್ದನು.
ಎರಡು ವರ್ಷದ ಕೆಳಗೆ ಬೆಂಬಲಿಗನಿಗೆ ಶಾಸಕ ಬಸವರಾಜ್ ದಡೆಸೂಗುರು ಕಾರು ಮಾರಿದ್ದರು. ಬೆಂಬಲಿಗ ಶಾಸಕರ ಗುರುತಿನ ಚೀಟಿಯನ್ನು ತೆಗೆಯದೇ ಹಾಗೆಯೇ ಬಳಸಿಕೊಂಡಿದ್ದಾನೆ. ಸದ್ಯ ಈ ಘಟನೆ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಹುಡುಕಾಟ ಸ್ಥಗಿತ
- ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು
- ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ದುರ್ಮರಣ
- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
- ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ