ಮಂಡ್ಯದ ವಿಸಿ ನಾಲೆಗೆ ಕಾರು ಪಲ್ಟಿ – ಚಾಲಕ ನಾಪತ್ತೆ

Team Newsnap
1 Min Read
Car overturned in Mandya's VC canal - driver missing ಮಂಡ್ಯದ ವಿಸಿ ನಾಲೆಗೆ ಕಾರು ಪಲ್ಟಿ – ಚಾಲಕ ನಾಪತ್ತೆ #kannadanews #mandya

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿಸಿ ನಾಲೆ ಪಲ್ಟಿಯಾಗಿದೆ ಚಾಲಕ ನಾಪತ್ತೆಯಾಗಿರುವ ಘಟನೆ ತಾಲೂಕಿನ ತಿಬ್ಬನಹಳ್ಳಿಯಲ್ಲಿ ನಡೆದಿದೆ.

ನಾಪತ್ತೆಯಾಗಿರುವ ಕಾರು ಚಾಲಕ ಲೋಕೇಶ್‌ಗಾಗಿ ತೀವ್ರ ಶೋಧ ನಡೆದಿದೆ. ಕಾಲುವೆಗೆ ತಡೆಗೋಡೆ ಇಲ್ಲದ ಕಾರಣ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿಸಿ ನಾಲೆಗೆ ಪಲ್ಟಿ ಹೊಡೆದಿದೆ.

ಮಳೆಯಿಂದ ಹೆಚ್ಚಾಗಿ ನೀರು ತುಂಬಿದ್ದ ಕಾರಣ ಕಾರು ಸಂಪೂರ್ಣ ಮುಳುಗಡೆಯಾಗಿದೆ. ಕಾರಿನಲ್ಲಿದ್ದ ಓರ್ವ ಪ್ರಾಣಾಪಾಯದಿಂದ ಪಾರಾಗಿದ್ದು, ಚಾಲಕ ನಾಪತ್ತೆಯಾಗಿದ್ದಾನೆ.

ಚಾಲಕ ಲೋಕೇಶ್ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದ್ದು ಕಾಲುವೆಯ ನೀರು ನಿಲ್ಲಿಸುವಂತೆ ಅಧಿಕಾರಿಗಳು ಸೂಚನೆ ನಿಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದು, ಕಾಲುವೆಗೆ ಬಿದ್ದಿರುವ ಕಾರನ್ನು ಮೇಲೆತ್ತಲು ಪ್ರಯತ್ನ ನಡೆಸಿದ್ದಾರೆ.9.20 ಲಕ್ಷ ರು ಗೆ ಮಾರಾಟವಾದ ಶ್ರೀರಂಗಪಟ್ಟಣ ರೈತನ ಎತ್ತು

ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Image 2023 07 21 at 9.21.33 PM 2
Share This Article
Leave a comment