ಬೆಂಗಳೂರು : ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿದ್ದಂತ ಅನುಮತಿ ನಿರ್ಧಾರ ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಈ ಅರ್ಜಿಯ ವಿಚಾರಣೆ ಇಂದು ಆರಂಭಗೊಳ್ಳುತ್ತಿದ್ದಂತೇ, ಹೈಕೋರ್ಟ್ ಗೆ ಸರ್ಕಾರದ ನಿರ್ಧಾರದ ಲಿಖಿತ ಪ್ರತಿಯನ್ನು ಎಜೆ ಶಶಿಕಿರಣ್ ಶೆಟ್ಟಿ ಸಲ್ಲಿಸಿದರು.
ಸರ್ಕಾರ ಅನುಮತಿ ನಿರ್ಧಾರ ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸಿಜೆ ಪಿ.ಬಿ ವರ್ಲೆ ಮತ್ತು ನ್ಯಾಯಮೂರ್ತಿ ಕೃಷ್ಣದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ಆರಂಭಿಸಿತು.
ಡಿಸಿಎಂ ಡಿಕೆ ಶಿವಕುಮಾರ್ ಪರವಾಗಿ ಅಭಿಷೇಕ್ ಸಿಂಘ್ವಿ ಹಾಜರಿದ್ದರು. ತನ್ನ ವಾದವನ್ನು ಹೈಕೋರ್ಟ್ ನ್ಯಾಯಪೀಠದ ಮುಂದೆ ಇಟ್ಟಂತ ಅವರು, ಸರ್ಕಾರ ಒಮ್ಮೆ ನಿರ್ಧಾರ ಕೈಗೊಂಡ ನಂತರ, ತನಿಖೆ ನಿಲ್ಲಬೇಕು ಎಂಬುದಾಗಿ ಸರ್ಕಾರದ ನಿಲುವನ್ನು ಸಮರ್ಥಿಸಿಕೊಂಡರು.ಡಿಸೆಂಬರ್ 5 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ
ಹೈಕೋರ್ಟ್ ನಲ್ಲಿ ಡಿಕೆಶಿ ವಿರುದ್ಧದ ಸಿಬಿಐ ತನಿಖೆಗೆ ಅನುಮತಿ ಪ್ರಶ್ನಿಸಿದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಯುತ್ತಿದೆ. ಅಂತಿಮವಾಗಿ ಹೈಕೋರ್ಟ್ ಯಾವ ಆದೇಶ, ನಿರ್ದೇಶನ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ