ದಾಖಲೆಗಾಗಿ ಪ್ರಾಣಿ ಹಿಂಸೆ ಮಾಡಿದ ಆರೋಪದ ಮೇರೆಗೆ 14.55 ಟನ್ ಕಬ್ಬು ಎಳೆಸಿದ ಜೊಡೆತ್ತುಗಳ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಇತ್ತೀಚೆಗೆ ಮಂಡ್ಯದಲ್ಲಿ ಯುವಕರ ತಂಡವೊಂದು ಎತ್ತಿನ ಗಾಡಿಯಲ್ಲಿ ಬರೊಬ್ಬರಿ 14.55 ಟನ್ ಕಬ್ಬು ತುಂಬಿ ಅವುಗಳನ್ನು ಎತ್ತುಗಳ ಮೂಲಕ ಸುಮಾರು 3 ಕಿ.ಮೀ ದೂರದವರೆಗೂ ಎಳೆಸಿದ್ದರು.
ಮಂಡ್ಯ ತಾಲೂಕಿನ ಹೆಚ್.ಮಲ್ಲಿಗೆರೆ ಗ್ರಾಮದ ವಿನಾಯಕ ಗೆಳೆಯ ಬಳಗದ ಯುವಕರು ದಾಖಲೆ ನಿರ್ಮಾಣಕ್ಕಾಗಿ ಈ ಕಾರ್ಯ ಮಾಡಿದ್ದರು.
ಈ ವಿಡಿಯೋ ವೈರಲ್ ಕೂಡ ಆಗಿತ್ತು. ಆದರೆ ಯುವಕರ ಇದೇ ಸಾಹಸ ಪ್ರಾಣಿ ಪ್ರಿಯರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ವಿಡಿಯೋ ವೈರಲ್ ಆಗುತ್ತಲೇ ಮಂಡ್ಯ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ ಜೊಡೆತ್ತುಗಳ ಮಾಲೀಕರ ವಿರುದ್ಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ.
3 ಲಕ್ಷ ಕ್ಕೆ ಎತ್ತು ಖರೀದಿ
ಈ ಜೋಡೆತ್ತುಗಳನ್ನು ಶರತ್ ಕಳೆದ ತಿಂಗಳಷ್ಟೇ 2.90 ಲಕ್ಷ ರೂ.ಗೆ ಖರೀದಿ ಮಾಡಿದ್ದರು.
ಮೂಲಗಳ ಪ್ರಕಾರ ಮಂಡ್ಯ ಜಿಲ್ಲೆಯಲ್ಲಿ ಇಲ್ಲಿವರೆಗೆ ಒಂದು ಗಾಡಿಗೆ 12 ಟನ್ ತುಂಬಲಾಗಿತ್ತು. ಆದರೆ ಮಲ್ಲಿಗೆರೆಯ ಯುವಕರ ತಂಡ 14.55 ಟನ್ ಕಬ್ಬು ತುಂಬಿ ಹಳೆಯ ದಾಖಲೆಯನ್ನು ಬ್ರೇಕ್ ಮಾಡಿದ್ದಾರೆ. ಇಷ್ಟು ಟನ್ ಕಬ್ಬು ತುಂಬಿದ ಎತ್ತಿನ ಗಾಡಿಯನ್ನು ಹುರುಗಲವಾಡಿ ಗ್ರಾಮದ ಶರತ್ ಅವರ ಜೋಡೆತ್ತುಗಳು ಮೂರು ಕಿಲೋಮೀಟರ್ ಎಳೆದು ತಂದಿದ್ದವು.
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು