ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖಾ ವರದಿಯನ್ನು ನನಗೇ ನೇರವಾಗಿ ಸಲ್ಲಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ನವದೆಹಲಿಯಲ್ಲಿ ವರದಿಗಾರರೊಂದಿಗೆ ಅವರು ಮಾತನಾಡಿ, ಈ ಪ್ರಕರಣದಲ್ಲಿ ಯಾವುದೇ ರೀತಿಯ ರಾಜಿ ಇಲ್ಲ ಎಂದು ಸ್ಪಷ್ಟಪಡಿಸಿದರು. ಘಟನೆ ಕುರಿತು ಪೊಲೀಸ್ ಮಹಾನಿರ್ದೇಶಕರು, ಎಡಿಜಿಪಿ ಪ್ರತಾಪ ರೆಡ್ಡಿ ಮತ್ತು ಮೈಸೂರು ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿರುವೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರಿಗೆ ಕಾನೂನಿನ ರೀತ್ಯ ಕಠಿಣ ಶಿಕ್ಷೆ ನೀಡುವಂತೆ ನಿರ್ದೇಶನ ನೀಡಿರುವುದಾಗಿ ತಿಳಿಸಿದರು.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ