ನವದೆಹಲಿ : ಉಪಮುಖ್ಯಮಂತ್ರಿ
ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸರ್ಕಾರ ಶಿಫಾರಸು ಮಾಡಿದ್ದನ್ನು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದರು
ಈ ವೇಳೆ ಹೈಕೋರ್ಟ್ ವಿಭಾಗೀಯ ಪೀಠ ಡಿಕೆ ಶಿವಕುಮಾರ್ ಸಲ್ಲಿಸಿದ ಅರ್ಜಿಗೆ ತಡೆಯಾಜ್ಞೆ ನೀಡಿತ್ತು.
ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳಿಸುವಂತೆ ಸಿಬಿಐ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿತ್ತು.ಸಿಬಿಐ ಸಲ್ಲಿಸಿದ್ದ ಅರ್ಜಿ ಕುರಿತಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ, ಸಿಬಿಐ ತನಿಖೆಗೆ ಸರ್ಕಾರ ಶಿಫಾರಸು ಮಾಡಿದ್ದನ್ನು ಡಿಕೆಶಿ ಪ್ರಶ್ನಿಸಿದ್ದರು. ಈ ವೇಳೆ ಹೈ ಕೋರ್ಟ್ ವಿಭಾಗೀಯ ಪೀಠದಲ್ಲಿ ಡಿಕೆ ಶಿವಕುಮಾರ್ ಸಲ್ಲಿಸಿದ ಅರ್ಜಿಗೆ ತಡೆಯಾಜ್ಞೆ ನೀಡಿತು. ಈ ಕುರಿತು ತಡೆಯಾಗ್ನೇ ತೆರೆವುಗೊಳಿಸುವಂತೆ ಸಿಬಿಐ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದೆ ಇಂದು ಡಿಕೆ ಶಿವಕುಮಾರ್ ಪರ ಹಿರಿಯವಕ ವಕೀಲ ಮುಕುಲ್ ರೋಹಟಗಿ ವಾದ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಈ ಪ್ರಕರಣದ ಕುರಿತಂತೆ ಕೆಲವು ದಿನಗಳ ಹಿಂದೆ ಡಿಕೆ ಶಿವಕುಮಾರ್ ಅವರು ಸಿಬಿಐ ನನ್ನನ್ನು ಒಂದು ದಿನವೂ ವಿಚಾರಣೆಗೆ ಕರೆದಿಲ್ಲ. ನಮ್ಮ ಕುಟುಂಬದ ನನ್ನ ಪತ್ನಿ ಹಾಗೂ ಮಗನನ್ನು ಕುರಿತು ಯಾವುದೇ ವಿಚಾರಣೆ ನಡೆಸಿಲ್ಲ ಇವರು ಹೇಗೆ ವರದಿಯನ್ನು ತಯಾರಿಸಿದರು ಎಂದು ಪ್ರಶ್ನಿಸಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು