ಡಿಕೆಶಿ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ : ಇಂದು ಸುಪ್ರೀಂನಲ್ಲಿ ಮೇಲ್ಮನವಿ ವಿಚಾರಣೆ

Newsnap Team
1 Min Read

ನವದೆಹಲಿ : ಉಪಮುಖ್ಯಮಂತ್ರಿ
ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಸರ್ಕಾರ ಶಿಫಾರಸು ಮಾಡಿದ್ದನ್ನು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದರು

ಈ ವೇಳೆ ಹೈಕೋರ್ಟ್ ವಿಭಾಗೀಯ ಪೀಠ ಡಿಕೆ ಶಿವಕುಮಾರ್ ಸಲ್ಲಿಸಿದ ಅರ್ಜಿಗೆ ತಡೆಯಾಜ್ಞೆ ನೀಡಿತ್ತು.

ಹೈಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳಿಸುವಂತೆ ಸಿಬಿಐ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿತ್ತು.ಸಿಬಿಐ ಸಲ್ಲಿಸಿದ್ದ ಅರ್ಜಿ ಕುರಿತಂತೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ, ಸಿಬಿಐ ತನಿಖೆಗೆ ಸರ್ಕಾರ ಶಿಫಾರಸು ಮಾಡಿದ್ದನ್ನು ಡಿಕೆಶಿ ಪ್ರಶ್ನಿಸಿದ್ದರು. ಈ ವೇಳೆ ಹೈ ಕೋರ್ಟ್ ವಿಭಾಗೀಯ ಪೀಠದಲ್ಲಿ ಡಿಕೆ ಶಿವಕುಮಾರ್ ಸಲ್ಲಿಸಿದ ಅರ್ಜಿಗೆ ತಡೆಯಾಜ್ಞೆ ನೀಡಿತು. ಈ ಕುರಿತು ತಡೆಯಾಗ್ನೇ ತೆರೆವುಗೊಳಿಸುವಂತೆ ಸಿಬಿಐ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದೆ ಇಂದು ಡಿಕೆ ಶಿವಕುಮಾರ್ ಪರ ಹಿರಿಯವಕ ವಕೀಲ ಮುಕುಲ್ ರೋಹಟಗಿ ವಾದ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ಈ ಪ್ರಕರಣದ ಕುರಿತಂತೆ ಕೆಲವು ದಿನಗಳ ಹಿಂದೆ ಡಿಕೆ ಶಿವಕುಮಾರ್ ಅವರು ಸಿಬಿಐ ನನ್ನನ್ನು ಒಂದು ದಿನವೂ ವಿಚಾರಣೆಗೆ ಕರೆದಿಲ್ಲ. ನಮ್ಮ ಕುಟುಂಬದ ನನ್ನ ಪತ್ನಿ ಹಾಗೂ ಮಗನನ್ನು ಕುರಿತು ಯಾವುದೇ ವಿಚಾರಣೆ ನಡೆಸಿಲ್ಲ ಇವರು ಹೇಗೆ ವರದಿಯನ್ನು ತಯಾರಿಸಿದರು ಎಂದು ಪ್ರಶ್ನಿಸಿದ್ದರು.

Share This Article
Leave a comment