ಜಾತಿ ಗಣತಿ ವರದಿ ವಿರೋಧ ಕಪೋಲಕಲ್ಪಿತ ಆರೋಪ : ಸಿದ್ದರಾಮಯ್ಯ

Team Newsnap
1 Min Read

ಜಾತಿ ಗಣತಿ ವರದಿಯನ್ನು ನಮ್ಮ ಪಕ್ಷದ ನಾಯಕರು ವಿರೋಧಿಸಿದ್ದರು ಎಂಬುದು ಕಪೋಲ ಕಲ್ಪಿತ ಆರೋಪ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಯಾರು, ಯಾವಾಗ ವಿರೋಧಿಸಿದ್ದರು ಎನ್ನುವುದನ್ನು ಬಿಜೆಪಿ ನಾಯಕರು ಬಹಿರಂಗಪಡಿಸಬೇಕು ಎಂದು ತಮ್ಮ ಟ್ವೀಟ್‌ನಲ್ಲಿ ಆಗ್ರಹಿಸಿದ್ದಾರೆ.

ವರದಿ ಸೋರಿಕೆ ಕುರಿತು ಖಚಿತ ಮಾಹಿತಿ ಮುಖ್ಯಮಂತ್ರಿಗಳ ಬಳಿ ಇದ್ದರೆ ಆ ಬಗ್ಗೆ ತನಿಖೆ ನಡೆಸಲಿ ಎಂದು ಸವಾಲು ಹಾಕಿದ್ದಾರೆ.


ಜಾತಿ ಗಣತಿ ವರದಿಯನ್ನು ನಮ್ಮ ಸರ್ಕಾರದ ಅವಧಿಯಲ್ಲೇ ಪೂರ್ಣಗೊಳಿಸಿ ಸ್ವೀಕರಿಸಬೇಕೆಂಬುದು ತಮ್ಮ ಉದ್ದೇಶವಾಗಿತ್ತು. ಅದರೆ ಅಂಕಿ ಅಂಶಗಳ ಮಾಹಿತಿ ಸಂಗ್ರಹವಾಗಿದ್ದರೂ ವಿಶ್ಲೇಷಣೆಯ ಕಾರ್ಯ ಪೂರ್ಣವಾಗದಿದ್ದರಿಂದ ಸಾಧ್ಯವಾಗಲಿಲ್ಲ ಎಂದು ಮಾಜಿ ಮುಖ್ಯಮಂತ್ರಿಗಳು ವಿವರಿಸಿದ್ದಾರೆ.


ಜಾತಿ ಗಣತಿ ವರದಿ ಸೋರಿಕೆಯಾಗಿದ್ದರೂ ಅದರ ಪಾವಿತ್ರ್ಯವೇನೋ ಹೋಗುವುದಿಲ್ಲ. ಸೋರಿಕೆಯಿಂದ ಅಪರಾಧಿಗಳು ಓಡಿಹೋಗಲು ಅದೇನು ಅಪರಾಧದ ತನಿಖಾ ವರದಿಯೇ ಎಂದು ಪ್ರಶ್ನಿಸಿದ್ದಾರೆ. ಅದೊಂದು ಸಮೀಕ್ಷಾ ವರದಿ. ಪರಿಶೀಲನೆ ನಡೆಯಬೇಕಿರುವುದು ಸಮೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ. ಆ ಕುರಿತು ಚರ್ಚೆಯಾಗಲಿ ಎಂದು ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.


ಜಾತಿ ಗಣತಿ ವರದಿಯನ್ನು ಒಪ್ಪಿಕೊಳ್ಳುವುದಕ್ಕೆ ಬಿಜೆಪಿ ನಾಯಕರು ತಯಾರಿಲ್ಲ. ಹಾಗಾಗಿ ಕುಂಟು ನೆಪ ಹೇಳುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

Share This Article
Leave a comment