Karnataka

ಕಾವೇರಿ ವಿವಾದ: ನೀರು ಹಂಚಿಕೆಗೆ ಸಂಕಷ್ಟ ಸೂತ್ರ- ಸುಪ್ರಿಂ ನಲ್ಲಿ ಸಮರಕ್ಕೆ ‘ರಾಜ್ಯ’ ಸಿದ್ದ

  • ‘ಸಮರ್ಥ’ ವಾದ ಮಾಡಲು ಸರ್ವಪಕ್ಷಗಳ ಸಭೆಯಲ್ಲಿ ಒಮ್ಮತದ ನಿರ್ಧಾರ
  • ರಾಜ್ಯದ ನೀರಾವರಿ ಸಮಸ್ಯೆಗಳ ಪರಿಹಾರಕ್ಕೆ ಪ್ರಧಾನಿ ಸರ್ವ ಪಕ್ಷ ನಿಯೋಗ – ಸಿಎಂ ಸಿದ್ದು

ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಮಳೆ ಕೊರತೆ ಆದಾಗ ನೀರು ಹಂಚಿಕೆಗೆ ಸಂಕಷ್ಟ ಸೂತ್ರ ರಚಿಸಬೇಕು ಮತ್ತು ಸುಪ್ರಿಂ ನಲ್ಲಿ ಸಮರಕ್ಕೆ ‘ರಾಜ್ಯ’ ಸಿದ್ದ ಎಂಬ ನಿರ್ಧಾರಕ್ಕೆ ರಾಜ್ಯದ ಸರ್ವ ಪಕ್ಷಗಳು ಬಂದಿವೆ.

ಇದೇವೇಳೆ ರಾಜ್ಯದ ಮೇಕೆದಾಟು, ಕಾವೇರಿ, ಮಹಾದಾಯಿ, ಕೃಷ್ಣಾ ಸಮಸ್ಯೆಗಳ ಕುರಿತು ಪ್ರಧಾನ ಮಂತ್ರಿಗಳ ಬಳಿ ಸರ್ಕಾರಕ್ಕೆ ಸರ್ವಪಕ್ಷ ನಿಯೋಗ ತೆರಳೋಣ. ಇದಕ್ಕೆ ಎಲ್ಲರ ಸಹಕಾರ ಬಯಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ತಿಳಿಸಿದರು.

ಕಾವೇರಿ, ಮೇಕೆದಾಟು ಮತ್ತು ಮಹಾದಾಯಿ ಜಲ ವಿವಾದಗಳ ಕುರಿತಂತೆ ಕಾವೇರಿ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರ್ವಪಕ್ಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರಾಜ್ಯದ ಹಿತ ಕಾಪಾಡಲು ನಾವು ಎಂದಿಗೂ ಬದ್ಧರಾಗಿರುತ್ತೇವೆ. ಐದಾರು ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳು ನಾಡಿಗೆ ಕಾವೇರಿ ನೀರು ಬಿಡಲು ಸಂಕಷ್ಟ ಎದುರಾಗುತ್ತದೆ. ಈ ಕುರಿತು ಸಂಕಷ್ಟ ಹಂಚಿಕೆ ಸೂತ್ರ ನಿರ್ದಿಷ್ಟ ಪಡಿಸಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟಿನಲ್ಲಿ ವಕೀಲರು ಸಮರ್ಥವಾಗಿ ವಾದ ಮಂಡಿಸಬೇಕು. ಇದಕ್ಕೆ ಸರ್ಕಾರ ಎಲ್ಲ ಅಗತ್ಯ ಬೆಂಬಲ ನೀಡಲಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಮೇಕೆದಾಟಿನಿಂದ ತಮಿಳುನಾಡಿಗೂ ಅನುಕೂಲ :

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ಸಂಕಷ್ಟ ಹಂಚಿಕೆ ಸೂತ್ರದ ಕುರಿತು ತೀರ್ಮಾನ ಆಗಲೇ ಬೇಕು. ಇಂತಹ ಸಂಕಷ್ಟದ ಸಮಯದಲ್ಲಿ 67 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯದ ಮೇಕೆದಾಟು ಸಮತೋಲನಾ ಜಲಾಶಯ ನಿರ್ಮಿಸಿದರೆ, ಅವರಿಗೆ ನೀರು ಬಿಡಲು ಅನುಕೂಲವಾಗುತ್ತದೆ. ಈ ಯೋಜನೆಗೆ ತಮಿಳುನಾಡು ವಿನಾಕಾರಣ ವಿರೋಧಿಸುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ಸಭೆಗಳಲ್ಲಿ ಅಧಿಕಾರಿಗಳ ಸಮರ್ಥ ವಾದ ಮಂಡನೆ :

ಕಾವೇರಿ ವಿವಾದ ಹಳೆಯದು. ಸರ್ವೋಚ್ಛ ನ್ಯಾಯಾಲಯ ನಮಗೆ ತೀರ್ಪು ಕೊಟ್ಟ ನಂತರ 2018 ರಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಾಗಿದೆ. ಕಾವೇರಿ ನೀರು ನಿಯಂತ್ರಣಾ ಸಮಿತಿ ಸ್ಥಾಪನೆಯಾಗಿದೆ. ಅನೇಕ ಸಭೆಗಳನ್ನು ಮಾಡಿದ್ದಾರೆ. ಕಾವೇರಿ ಪ್ರಾಧಿಕಾರ 22 ಸಭೆ ಹಾಗೂ ನಿಯಂತ್ರಣ ಸಮಿತಿ 84 ಸಭೆ ನಡೆಸಿದೆ. ಈ ಸಮಿತಿಗಳಾದ ಮೇಲೆ, ರಾಜ್ಯದಲ್ಲಿ ಸಂಕಷ್ಟದ ದಿನಗಳು ಎದುರಾಗಿದೆ. ಆಗ ನಾವು ನಿಯಂತ್ರಣ ಸಮಿತಿ, ಪ್ರಾಧಿಕಾರದಲ್ಲಿ ಚರ್ಚಿಸಿ, ಅದರ ತೀರ್ಮಾನದಂತೆ ನಡೆದುಕೊಂಡ ಅನೇಕ ನಿದರ್ಶನಗಳಿವೆ. ಕಾವೇರಿ ನಿಯಂತ್ರಣ ಸಮಿತಿ ಮತ್ತು ಪ್ರಾಧಿಕಾರದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಅಧಿಕಾರಿಗಳು ಸಂಕಷ್ಟದ ಬಗ್ಗೆ ಪ್ರತಿಪಾದನೆ ಮಾಡಿದ್ದಾರೆ ಎಂದರು

ಈ ವರ್ಷ ಮಳೆ ಕಡಿಮೆ ಆಯಿತು. ಜೂನ್‌ ಹಾಗೂ ಆಗಸ್ಟ್‌ ನಲ್ಲಿ ಮಳೆ ಕೊರತೆಯಾಗಿದೆ. ಇಲ್ಲಿಯ ವರೆಗೆ ನೀರು ಬಿಡಬೇಕಾಗಿದ್ದಿದ್ದು 86.38 ಟಿಎಂಸಿ. ಆದರೆ 20 ನೇ ತಾರೀಖಿನ ವರೆಗೆ ನೀರು ಬಿಟ್ಟಿರುವುದು 24 ಟಿಎಂಸಿ. ಅಂದರೆ ನಾವು ವಿರೋಧ ಮಾಡಿದ್ದೇವೆ; ವಾಸ್ತವವನ್ನು ಪ್ರಾಧಿಕಾರದ ಮುಂದೆ ಬಿಡಿಸಿಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇವೆ ಎಂದು ತಿಳಿಸಿದರು

ಮಳೆ ಕೊರತೆಯಿಂದಾಗಿ ಬೆಳೆಗಳಿಗೆ ನೀರು ಬಿಟ್ಟಿಲ್ಲ, ಕುಡಿಯುವ ನೀರಿಗೆ ನೀರು ಬೇಕಾಗುತ್ತದೆ ಎಂದು ವಿವರಿಸಲಾಗಿದೆ.

ನಾವು ವಾದ ಮಾಡಿದ್ದರಿಂದಲೇ 15,000 ಕ್ಯೂಸೆಕ್ಸ್‌ ನೀರಿನಿಂದ 10,000 ಕ್ಯೂಸೆಕ್ಸ್‌ ನೀರಿಗೆ ಇಳಿಕೆ ಮಾಡಲಾಯಿತು. ಅದನ್ನೂ ಮರು ಪರಿಶೀಲನೆ ಮಾಡುವಂತೆ ಅರ್ಜಿ ಸಲ್ಲಿಸಿದೆವು. 15,000 ಕ್ಯುಸೆಕ್ಸ್‌ ನೀರು ಕೊಡಲಾಗದು ಎಂದು ರಾಜ್ಯದ ಅಧಿಕಾರಿಗಳು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ವಾದ ಮಂಡಿಸುತ್ತಿರುವಾಗಲೇ ತಮಿಳುನಾಡಿದ ಅಧಿಕಾರಿಗಳು ಸಭಾತ್ಯಾಗ ಮಾಡಿದರು. ನಂತರ ಸುಪ್ರೀಂ ಕೋರ್ಟಿನಲ್ಲಿ ಮನವಿ ಸಲ್ಲಿಸಿದ್ದಾರೆ. 25ರಂದು ಈ ಪ್ರಕರಣ ವಿಚಾರಣೆಗೆ ಬರಲಿದ್ದು, ಈ ವಿಷಯದಲ್ಲಿ ವಕೀಲರು ಸಮರ್ಥವಾಗಿ ವಾದ ಮಾಡುತ್ತಾರೆ ಎಂದು ವಿಶ್ವಾಸದಿಂದ ನುಡಿದರು.

ಸಂಪೂರ್ಣ ಸಹಕಾರ – ಸರ್ವಪಕ್ಷಗಳ ಬೆಂಬಲ :

ಸಭೆಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ. ಸದಾನಂದ ಗೌಡ, ವೀರಪ್ಪ ಮೊಯಿಲಿ, ಜಗದೀಶ ಶೆಟ್ಟರ, ಹೆಚ್.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಸಂಸದರಾದ ಸುಮಲತಾ, ಜಗ್ಗೇಶ, ಡಾ. ಹನುಮಂತಯ್ಯ, ಮುನಿಸ್ವಾಮಿ, ಜಿ.ಎಂ. ಸಿದ್ದೇಶ್ವರ, ಜಿ.ಸಿ. ಚಂದ್ರಶೇಖರ್‌, ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಮೊದಲಾದವರು ರಾಜ್ಯದ ಕಾನೂನು ಹೋರಾಟಕ್ಕೆ ಬೆಂಬಲ ಸೂಚಿಸಿದರು.

ರೈತರ ಹಿತ ರಕ್ಷಣೆಗೆ ಸರ್ಕಾರದೊಂದಿಗೆ ಇರುವುದಾಗಿ ಬೆಂಬಲ ವ್ಯಕ್ತಪಡಿಸಿದರು. ಹಾಗೂ ಸಂಕಷ್ಟ ಹಂಚಿಕೆ ಸೂತ್ರವನ್ನು ಇನ್ನಷ್ಟು ನಿರ್ದಿಷ್ಟಪಡಿಸುವ ಅಗತ್ಯವಿದೆ ಎಂಬ ಅಭಿಪ್ರಾಯ ವ್ಯಕ್ತವಾಯಿತು. ವಕೀಲರ ತಂಡ ಹಿಂದಿನ ಅನುಭವಗಳನ್ನು ಬಳಸಿ ರಾಜ್ಯದ ಹಿತದೃಷ್ಟಿಯಿಂದ ಸಮರ್ಥವಾಗಿ ವಾದ ಮಂಡಿಸುವ ಕುರಿತು ಸಲಹೆ ನೀಡಿದರು.ಏಡಿ ಹಿಡಿಯಲು ಹೋಗಿ ಬಾಲಕ ನೀರು ಪಾಲು 

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ, ಹೆಚ್.ಡಿ. ಕುಮಾರಸ್ವಾಮಿ, ಜಗದೀಶ ಶೆಟ್ಟರ, ಡಿ.ವಿ. ಸದಾನಂದಗೌಡ, ವೀರಪ್ಪ ಮೊಯಿಲಿ, ಸಚಿವರಾದ ಹೆಚ್‌.ಕೆ. ಪಾಟೀಲ, ಚಲುವರಾಯಸ್ವಾಮಿ, ಡಾ. ಜಿ. ಪರಮೇಶ್ವರ, ಕೆ.ಜೆ. ಜಾರ್ಜ್‌, ಕೃಷ್ಣ ಬೈರೇಗೌಡ, ನವದೆಹಲಿಯಲ್ಲಿ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಎಲ್ಲ ಪಕ್ಷಗಳ ಶಾಸಕರು ಸಂಸದರು, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌, ಅಡ್ವೊಕೇಟ್‌ ಜನರಲ್‌ ಶಶಿಕಿರಣ್‌ ಶೆಟ್ಟಿ, ಹಿರಿಯ ವಕೀಲರಾದ ಮೋಹನ್‌ ಕಾತರಕಿ ಮತ್ತು ಇತರ ಕಾನೂನು ತಜ್ಞರು, ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Team Newsnap
Leave a Comment

Recent Posts

ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು : 10 ವರ್ಷದ ಬಾಲಕಿಗೆ ಚಾಕ್ಲೆಟ್ ಕೊಡಿಸುವುದಾಗಿ ನಂಬಿಸಿ ಕಾಮುಕನೊಬ್ಬ ಅತ್ಯಾಚಾರ ಎಸೆಗಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ… Read More

May 20, 2024

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ಪ್ಲೆಸ್ ಕ್ಲಬ್… Read More

May 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 20 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,400 ರೂಪಾಯಿ ದಾಖಲಾಗಿದೆ. 24… Read More

May 20, 2024

ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ

ಪ್ರಕರಣದಿಂದ ಸ್ವಾರ್ಥ ರಾಜಕಾರಣಿಗಳಿಗೆ, ಕೆಲ ಮಾಧ್ಯಮಗಳಿಗೆ, ಗಂಜಿ ಗಿರಾಕಿಗಳಿಗೆ ಮಾತ್ರ ಲಾಭ ?! ಬರಗಾಲದಿಂದ ರಾಜ್ಯದಲ್ಲಿ ಆಗಿರುವ ಅನಾಹುತ ,… Read More

May 20, 2024

ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ

ಕುಂದಾಪುರ : ಮೇ 16 ರ ರಾತ್ರಿ ಗೋಪಾಡಿ ಗ್ರಾಮದ ಮೂಡುಗೋಪಾಡಿಯ ನಿವಾಸಿ ಜಯಂತಿ ಶೆಟ್ಟಿ (61) ಅವರ ಮೃತದೇಹ… Read More

May 19, 2024

ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ

2015ರಲ್ಲಿ ಶಿಲ್ಪಾ ಎಂಬುವವರ ಜೊತೆ ಮದುವೆಯಾಗಿದ್ದ ನಟ ಚಂದು ತ್ರಿನಯನಿ ಸೀರಿಯಲ್​ನಲ್ಲಿ ಅಭಿನಯಿಸಿದ್ದ ತೆಲುಗು ನಟ ಚಂದು ನಟಿ ಪವಿತ್ರ… Read More

May 18, 2024