December 23, 2024

Newsnap Kannada

The World at your finger tips!

WhatsApp Image 2022 07 10 at 1.59.01 PM

ಕಾವೇರಿ ನದಿ ನೀರು ವಿವಾದ : ಅರ್ಜಿ ವಿಚಾರಣೆ ಸೆ. 21 ಕ್ಕೆ ಮುಂದೂಡಿಕೆ

Spread the love

ಕರ್ನಾಟಕ ಕಾವೇರಿ ನೀರನ್ನು ಸಮರ್ಪಕವಾಗಿ ಹರಿಸುತ್ತಿಲ್ಲ ಎಂದು ಆರೋಪಿಸಿ ತಮಿಳುನಾಡು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಇಂದು ಈ ಅರ್ಜಿ ವಿಚಾರಣೆ ನಡೆಯಲಿದೆ ಎನ್ನಲಾಗಿತ್ತು, ಆದರೆ ಇಂದಿನ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆ.21 ಕ್ಕೆ ವಿಚಾರಣೆ ಮುಂದೂಡಿದೆ.

ಈ ಮೊದಲು ಅರ್ಜಿ ವಿಚಾರಣೆಗೆ ಪಟ್ಟಿ ಮಾಡಲಾಗಿತ್ತು. ಆದರೆ ನ್ಯಾಯಾಧೀಶರ ಅನುಪಸ್ಥಿತಿ ಹಿನ್ನೆಲೆ ಪಟ್ಟಿಯಿಂದ ಹಿಂತೆಗೆದುಕೊಳ್ಳಲಾಗಿತ್ತು. ಈ ಹಿನ್ನೆಲೆ ಉಪಸ್ಥಿತಿ ನ್ಯಾಯಾಧೀಶರ ಮುಂದೆ ತಮಿಳುನಾಡು ಪರ ವಕೀಲ ಮುಕುಲ್ ರೋಹಟಗಿ ಅರ್ಜಿ ವಿಚಾರಣೆಗೆ ಪ್ರಸ್ತಾಪಿಸಿದರು. ಬುಧವಾರ ವಿಚಾರಣೆ ನಡೆಸುವುದಾಗಿ ಪೀಠ ಹೇಳಿತ್ತು. ಈಗ ಮತ್ತೆ ವಿಚಾರಣೆಯಿಂದ ಕೈಬಿಡಲಾಗಿದೆ. ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿ ನ್ಯಾ.ಬಿ.ಆರ್ ಗವಾಯಿ, ಬುಧವಾರ ನ್ಯಾ.ಪಿ ನರಸಿಂಹ ಅವರ ಅನುಪಸ್ಥಿತಿ ಇದೆ. ಈ ಹಿನ್ನೆಲೆ ವಿಚಾರಣೆಯಿಂದ ಕೈ ಬಿಟ್ಟಿದೆ. ಮುಂದಿನ ವಾರ ನಾನೂ ವಿಚಾರಣೆಗೆ ಲಭ್ಯವಿಲ್ಲ. ನೀವು ಮುಖ್ಯ ನ್ಯಾಯಾಧೀಶರ ಮುಂದೆ ಹೋಗಿ ಹೊಸ ಪೀಠಕ್ಕೆ ಮನವಿ ಮಾಡಿ ಎಂದು ಸೂಚಿಸಿದರು. ಇದಕ್ಕೆ ಒಪ್ಪದ ಎರಡೂ ರಾಜ್ಯದ ವಕೀಲರು ಹೊಸ ಪೀಠದಲ್ಲಿ ಮೊದಲಿನಿಂದ ವಿಚಾರಣೆ ಆರಂಭಿಸಬೇಕಾಗುತ್ತದೆ ಎಂದು ಹೇಳಿದರು. 

ಇದಕ್ಕೆ ಉತ್ತರಿಸಿದ ನ್ಯಾ.ಬಿ.ಆರ್ ಗವಾಯಿ, ಹಾಗಿದ್ದರೆ ಸೆಪ್ಟೆಂಬರ್ 21ರಂದು ವಿಚಾರಣೆ ನಡೆಸುವುದಾಗಿ ಹೇಳಿದರು. ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಪರ ಸಲ್ಲಿಸಿದ್ದ ಅರ್ಜಿ ಪ್ರಸ್ತಾಪಿಸಿದ ವಕೀಲ ವಿದ್ಯಾ ಸಾಗರ್ ಮುಖ್ಯ ಅರ್ಜಿಯೊಂದಿಗೆ ವಿಲೀನಗೋಳಿಸಲು ಮನವಿ ಮಾಡಿದರು. ಅದಕ್ಕೆ ಮುಖ್ಯ ಅರ್ಜಿ ವಿಚಾರಣೆ ವೇಳೆ ಪರಿಗಣಿಸಲಾಗುವುದು ಎಂದು ನ್ಯಾ.ಬಿಆರ್ ಗವಾಯಿ ಹೇಳಿದರು.

ಕಾವೇರಿ ನೀರಿಗಾಗಿ ಎರಡು ರಾಜ್ಯ ಸರ್ಕಾರಗಳು ಕಾನೂನು ಹೋರಾಟ ನಡೆಸುತ್ತಿರುವ ಮಧ್ಯೆ ಕರ್ನಾಟಕದ ರೈತ ಸಂಘಟನೆಗಳು ಸುಪ್ರೀಂಕೋರ್ಟ್ ಮೊರೆ ಹೋಗಿವೆ. ಕಾವೇರಿ ನೀರಿಗಾಗಿ ರೈತ ಸಂಘಟನೆಗಳು ಕೂಡ ಸುಪ್ರೀಂಗೆ ಅರ್ಜಿ ಸಲ್ಲಿಸಿವೆ.‌ ನಾವು ಬೆಳೆಗೆ ನೀರು ಕೇಳುತ್ತಿಲ್ಲ, ಕುಡಿಯಲು ಕೇಳುತ್ತಿದ್ದೇವೆ ಎಂದು ಮನವಿ ಮಾಡಿವೆ.

Copyright © All rights reserved Newsnap | Newsever by AF themes.
error: Content is protected !!