ಡಿ.ಕೆ.ಶಿವಕುಮಾರ್ ಒಡೆತನ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ

Team Newsnap
1 Min Read

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಲೀಕತ್ವದ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ಅಧಿಕಾರಿಗಳ ತಂಡ ಸೋಮವಾರ ದಾಳಿ ನಡೆಸಿದೆ.

ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ಗ್ಲೋಬಲ್ ಕಾಲೇಜಿನ ಮೇಲೆ ಸಿಬಿಐ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದೆ. ಆಸ್ತಿ ಮೌಲ್ಯಮಾಪನ ಕಾರ್ಯವೂ ಕೂಡ ನಡೆಯುತ್ತಿದೆ.ರಾಜ್ಯದ 93 ಕ್ಷೇತ್ರಗಳಲ್ಲಿ ಸ್ಪರ್ದೆ ಮಾಡುವ ಜೆಡಿಎಸ್ ಪಟ್ಟಿ ಬಿಡುಗಡೆ -ಅಪ್ಪ , ಮಕ್ಕಳಿಗೆ ಟಿಕೆಟ್

ಕಳೆದೆರಡು ತಿಂಗಳ ಹಿಂದೆ ರಾಮನಗರದಲ್ಲಿ ಮೌಲ್ಯಮಾಪನ ಮಾಡಲಾಗಿತ್ತು. ಸಿಬಿಐ ಅಧಿಕಾರಿಗಳು ಈಗ ಡಿಕೆಶಿ ಮಾಲೀಕತ್ವದ ಎಲ್ಲಾ ಆಸ್ತಿಗಳ ಮೌಲ್ಯಮಾಪನ ಮಾಡುತ್ತಿದ್ದಾರೆ. ಅಕ್ರಮ ಆಸ್ತಿಗೆ ಸಂಬಂಧಿಸಿದಂತೆ ಮೌಲ್ಯಮಾಪನ ನಡೆಸಲಾಗುತ್ತಿದೆ.

ಗ್ಲೋಬಲ್ ಕಾಲೇಜಿಗೆ ಡಿ.ಕೆ.ಶಿವಕುಮಾರ್ ಅಧ್ಯಕ್ಷಹಾಗೂ ಅವರ ಪುತ್ರಿ ಐಶ್ವರ್ಯ. ಕಾರ್ಯದರ್ಶಿಯಾಗಿದ್ದಾರೆ.

2013 ರಿಂದ 2018ರ ವರೆಗೆ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಹಿನ್ನೆಲೆಯಲ್ಲಿ 2020ರ ಅಕ್ಟೋಬರ್ ತಿಂಗಳಲ್ಲೂ ಸಿಬಿಐ ದಾಳಿ ನಡೆಸಿತ್ತು. 74.92 ಕೋಟಿ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ್ದ ಆರೋಪದಡಿ ಎಫ್‌ಐಆರ್ ದಾಖಲಿಸಿದ್ದ ಸಿಬಿಐ, ಡಿಕೆಶಿ ಮತ್ತು ಡಿ.ಕೆ.ಸುರೇಶ್ ಸೇರಿದಂತೆ 14 ಸ್ಥಳಗಳಲ್ಲಿ ದಾಳಿ ನಡೆಸಿತ್ತು.

Share This Article
Leave a comment