ಕನಕಪುರ, ದೊಡ್ಡ ಆಲಹಳ್ಳಿ ಸಂತೆ ಕೋಡಿಹಳ್ಳಿಯಲ್ಲಿರುವ ಡಿಕೆ ಶಿವಕುಮಾರ್ ನಿವಾಸಕ್ಕೆ ಸಿಬಿಐ ಅಧಿಕಾರಿಗಳು ಭೇಟಿ ನೀಡಿದ್ದು, ಸುಮಾರು 1 ಗಂಟೆ ಡಿಕೆಶಿ ನಿವಾಸದಲ್ಲಿ ಆಸ್ತಿ ಪಾಸ್ತಿಗಳ ಬಗ್ಗೆ ಪರಿಶೀಲನೆ ನಡೆಸಿದರು. ಕೆಲವು ಮಹತ್ವದ ದಾಖಲೆಗಳ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಇದನ್ನು ಓದಿ – ನಟಿ ದೀಪಿಕಾ ಪಡುಕೋಣೆಗೆ ಅನಾರೋಗ್ಯ ಮುಂಬೈ ಆಸ್ಪತ್ರೆಯಲ್ಲಿ ಚಿಕಿತ್ಸೆ
ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜಾರಿ ನಿರ್ದೇಶನಾಲಯ (ಇ.ಡಿ)ದ ವಿಚಾರಣೆಗೆ ಹಾಜರಾಗಿದ್ದರು. ಆದಾಯಕ್ಕಿಂತ ಹೆಚ್ಚು ಆಸ್ತಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಇಡಿ ನೋಟೀಸ್ ನೀಡಿತ್ತು, ಇಡಿ ವಿಚಾರಣೆ ಬಳಿಕ ಡಿಕೆಶಿಗೆ ಸಿಬಿಐ ಮತ್ತೆ ಶಾಕ್ ನೀಡಿದೆ.
ಸಿಬಿಐ ಅಧಿಕಾರಿಗಳು ಕನಕಪುರ ತಹಶೀಲ್ದಾರ್ ಹಾಗೂ ಪೋಲೀಸರ ಜತೆಗೆ ತೆರಳಿದ್ದರು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು