ಡಿಕೆಶಿ, ಡಿಕೆಎಸ್ ನಿವಾಸಗಳ ಮೇಲೆ ಸಿಬಿಐ ದಾಳಿ – ಕಾಂಗ್ರೆಸ್ ಗೆ ಶಾಕ್

Team Newsnap
0 Min Read

ಬೆಂಗಳೂರಿನ ಸದಾಶಿವನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನಿವಾಸದ ಮೇಲೆ ಮತ್ತೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ.

7 ಅಧಿಕಾರಿಗಳ ತಂಡ ಸೋಮವಾರ ಬೆಳ್ಳಂಬೆಳಿಗ್ಗೆ ಡಿ. ಕೆ. ಶಿವಕುಮಾರ್ ಹಾಗೂ ಸಂಸದ ಡಿ. ಕೆ. ಸುರೇಶ್ ನಿವಾಸಗಳ ಮೇಲೆ ಏಕ ಕಾಲಕ್ಕೆ ದಾಳಿ ಮಾಡಿ ಮಹತ್ವದ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಇಡಿ, ಐಟಿ ಅಧಿಕಾರಿಗಳ ತನಿಖೆ ನಂತರ ಈಗ ಸಿಬಿಐ ತನ್ನ ತನಿಖೆಯನ್ನು ಮುಂದುವರೆಸಿದೆ. ಸಹೋದರರ ನಿವಾಸ ಹಾಗೂ ಕಚೇರಿಯೂ ಸೇರಿದಂತೆ ಕನಕಪುರ ನಿವಾಸದ ಮೇಲೆ ದಾಳಿ ಮಾಡಿ ದಾಖಲೆಗಳ ಪರಿಶೀಲನೆ ಕಾರ್ಯವನ್ನು ಅಧಿಕಾರಿಗಳು ಆರಂಭಿಸಿದರು.

Share This Article
Leave a comment