ಕೇಂದ್ರ ಸರ್ಕಾರ ಸಿಬಿಎಸ್ ಸಿ 12ನೇ ತರಗತಿ ಪರೀಕ್ಷೆಯನ್ನೇ ರದ್ದು ಮಾಡಿ ಆದೇಶ ಹೊರಡಿಸಿದೆ.
ದೇಶಾದ್ಯಂತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಹೇಳಿದೆ
ಸಿಬಿಎಸ್ ಸಿ 12ನೇ ತರಗತಿ ಪರೀಕ್ಷೆಗಳನ್ನು ನಡೆಸುವ ವಿಚಾರವಾಗಿ ದೇಶದಾದ್ಯಂತ ದೊಡ್ಡ ಮಟ್ಟದ ಪರ-ವಿರೋಧ ವ್ಯಕ್ತವಾಗಿತ್ತು.
ಕೊರೊನಾ ಎರಡನೇ ಅಲೆಯ ಭಾರಿ ಆತಂಕ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಪರೀಕ್ಷೆಗಳನ್ನು ನಡೆಸುವುದು ಉಚಿತವಲ್ಲ ಎಂದು ಹಲವು ರಾಜ್ಯ ಸರ್ಕಾರಗಳು ಹಾಗೂ ವಿರೋಧ ಪಕ್ಷಗಳೂ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿದ್ದವು.
ಮಂಗಳವಾರ ಸಂಜೆ ಪ್ರಧಾನಿ ಮಹತ್ವದ ಸಭೆ ನಡೆಸಿ ಉನ್ನತ ಅಧಿಕಾರಿಗಳೊಂದಿಗೆ ಪರೀಕ್ಷೆ ವಿಚಾರವಾಗಿ ಚರ್ಚೆ ನಡೆಸಿದರು.
ಸಭೆಯ ನಂತರ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗಳನ್ನ ರದ್ದು ಮಾಡಿ ಆದೇಶ ಹೊರಡಿಸಿದೆ.
More Stories
ನವೆಂಬರ್ 28: ರಾಜ್ಯದ ಅಭಿವೃದ್ಧಿಗೆ ಮಹತ್ವದ ಸಚಿವ ಸಂಪುಟ ಸಭೆ
ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ: `ವಕ್ಫ್ ತಿದ್ದುಪಡಿ’ ಸೇರಿ 16 ಮಸೂದೆ ಮಂಡಿಸಲು ಸರ್ಕಾರ ಸಜ್ಜು!
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ