CBSE 10-12ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಪ್ರಕಟ

Team Newsnap
1 Min Read

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE)ನ 10ನೇ ಮತ್ತು 12ನೇ ತರಗತಿಯ ಪರೀಕ್ಷಾ ದಿನಾಂಕ ಪ್ರಕಟವಾಗಿದೆ. ಫೆಬ್ರವರಿ 15ರಂದೇ ಎರಡೂ ಪರೀಕ್ಷೆಗಳು ಆರಂಭವಾಗಲಿವೆ.

10ನೇ ತರಗತಿ ಪರೀಕ್ಷೆಯು ಫೆಬ್ರವರಿ 15ರಿಂದ ಆರಂಭವಾಗಿ, ಮಾರ್ಚ್ 21ರವರೆಗೆ ನಡೆಯಲಿದೆ.

ಅದೇ ರೀತಿಯಾಗಿ 12ನೇ ತರಗತಿ ಪರೀಕ್ಷೆಯು ಫೆಬ್ರವರಿ 15ರಂದು ಪ್ರಾರಂಭವಾಗುತ್ತದೆ. ಏಪ್ರಿಲ್ 5ರಂದು ಈ ಪರೀಕ್ಷೆ ಕೊನೆಗೊಳ್ಳುತ್ತದೆ.

10, 12ನೇ ತರಗತಿಯ ಎರಡೂ ಪರೀಕ್ಷೆಗಳು ಬೆಳಗ್ಗೆ 10.30ಕ್ಕೆ ಆರಂಭವಾಗಿ ಮಧ್ಯಾಹ್ನ 1.30ಕ್ಕೆ ಮುಕ್ತಾಯವಾಗಲಿವೆ.

ಸಿಬಿಎಸ್​ಐ ಮಂಡಳಿಯು ಜೆಇಇ ಮುಖ್ಯ ಪರೀಕ್ಷೆ ಸೇರಿ ಸ್ಪರ್ಧಾತ್ಮಕ ಪರೀಕ್ಷೆಗಳ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷಾ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಇದೇ ವೇಳೆ ಯಾವುದೇ ವಿದ್ಯಾರ್ಥಿಗಳಿಗೂ ಇತರ ವಿಷಯಗಳ ಪರೀಕ್ಷೆಗೆ ತೊಂದರೆಯಾಗದಂತೆ ಪರೀಕ್ಷಾ ದಿನಾಂಕ ನಿಗದಿ ಪಡಿಸಲಾಗಿದೆ ಎಂದು ಹೇಳಿದೆ. ಸುಮಲತಾ ಬಿಜೆಪಿ ಸೇರ್ಪಡೆ ಬಗ್ಗೆ ಯಾವುದೇ ಚರ್ಚೆ ಇಲ್ಲ – ನಳಿನ್ ಕುಮಾರ್ ಕಟೀಲ್

ಜೊತೆಗೆ ಸಿಬಿಎಸ್‌ಇಯು 10, 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಓದಿಕೊಳ್ಳಲು 15 ನಿಮಿಷಗಳ ಓದುವ ಸಮಯವನ್ನು ನೀಡುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಯನ್ನು ಸಿಬಿಎಸ್​ಐಯ ಅಧಿಕೃತ ವೆಬ್‌ಸೈಟ್ ನಲ್ಲಿ ಪರಿಶೀಲಿಸಬಹುದು.

Share This Article
Leave a comment