‘ಮುಂಗಾರು ಮಳೆ 2’ ಚಿತ್ರದಲ್ಲಿ ನಾಯಕಿ ನೇಹಾ ಶೆಟ್ಟಿ ತಂದೆ ಹರಿರಾಜ್ ಶೆಟ್ಟಿಯನ್ನು ಜೂಜು ಅಡ್ಡೆ ನಡೆಸುತ್ತಿದ್ದ ಕಾರಣಕ್ಕೆ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.
ಗೂಂಡಾ ಕಾಯ್ದೆಯಡಿ ಹರಿರಾಜ್ ಶೆಟ್ಟಿಯನ್ನು ಬಂಧಿಸಲಾಗಿತ್ತು. ಇದಾದ ಬಳಿಕ ಅವರು ಕೋರ್ಟ್ ಮೆಟ್ಟಿಲೇರಿದ್ದರು. ಈ ವೇಳೆ, ಪೊಲೀಸರು ನನ್ನ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಸುಳ್ಳು ಪ್ರಕರಣ ದಾಖಲಿಸಿದ್ದಾರೆ ಎಂದು ಕೋರ್ಟ್‌ನಲ್ಲಿ ದೂರಿದ್ದರು. ನಂತರ ಕೋರ್ಟ್‌ನಲ್ಲಿ ತಡೆಯಾಜ್ಞೆ ಪಡೆದು ಜೈಲಿನಿಂದ ಹೊರ ಬಂದಿದ್ದರು.
ಈಗ ಗೂಂಡಾ ಕಾಯ್ದೆ ತಡೆ ತೆರವಿಗೆ ಸಿಸಿಬಿ ಮನವಿ ಮಾಡಿತ್ತು.ಈ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದ ಬಳಿಕ ಮತ್ತೆ ಆರೋಪಿ ಹರಿರಾಜ್ ಬಂಧಿಸಿ ಜೈಲಿಗೆ ಕರೆದೊಯ್ಯಲಾಗಿದೆ.
ರಿಕ್ರಿಯೇಷನ್ ಕ್ಲಬ್ ಹೆಸರಿನಲ್ಲಿ ಅವರು ಜೂಜು ದಂಧೆ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಹರಿರಾಜ್ ಮೇಲೆ 19 ಕೇಸ್ಗಳು ದಾಖಲಾಗಿವೆ.
ಕೋರಮಂಗಲ, ಕಬ್ಬನ್ ಪಾರ್ಕ್, ಅಶೋಕ ನಗರ, ಬಸವೇಶ್ವರ ನಗರ, ಸೇರಿ ಹಲವು ಪೊಲೀಸ್ ಠಾಣೆಗೆ ಇವರು ಬೇಕಾಗಿದ್ದಾರೆ.
More Stories
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
ಕ್ಷಣಾರ್ಧದಲ್ಲಿ 33 ಲಕ್ಷ ಕಳ್ಳತನ: ಓರ್ವ ಆರೋಪಿ ಬಂಧನ
ಚಾಮರಾಜನಗರದಲ್ಲಿ ಖಾಸಗಿ ಬಸ್ ಪಲ್ಟಿ: ಓರ್ವ ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ