ಜಿಎಸ್ಟಿ ಕಟ್ಟದೇ ವಂಚನೆ ಮಾಡಿದ ಆರೋಪ ಹಾಗೂ ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಮಾಡುತ್ತಿರುವ ಕಾರಣ ರೇಸ್‌ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ಪೊಲೀಸರು (CCB Police) ದಾಳಿ ನಡೆಸಿದ್ದಾರೆ.
ತಡರಾತ್ರಿ 1 ಗಂಟೆ ಸುಮಾರಿಗೆ ದಾಳಿ ನಡೆದಿದ್ದು , ದಾಳಿ ವೇಳೆ ದಾಖಲೆಗಳಿಲ್ಲದ 3.47 ಕೋಟಿ ರೂ. ಜಪ್ತಿ ಮಾಡಲಾಗಿದೆ.
ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, 60 ಜನರನ್ನ ವಶಕ್ಕೆ ಪಡೆದು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.ಭಾರತದ ಅತಿ ಉದ್ದದ ಸಮುದ್ರ ಸೇತುವೆ ‘ಅಟಲ್ ಸೇತು’ ಇಂದು ಲೋಕಾರ್ಪಣೆ
ಸಿಸಿಬಿ ಪೊಲೀಸರು ದಾಳಿ ಸಂದರ್ಭದಲ್ಲಿ ಸಿಕ್ಕ ಹಣಕ್ಕೆ ಸೂಕ್ತ ದಾಖಲೆ ಸಲ್ಲಿಸುವಂತೆ ಸೂಚಿಸಿ , ದಾಖಲೆ ಸಲ್ಲಿಸಲು ವಿಫಲರಾದರೇ ನಿರ್ದೇಶನಾಲಯಕ್ಕೆ (ಇಡಿ) ಮಾಹಿತಿ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು