crime

CCB Raid – ಬೆಂಗಳೂರು ರೇಸ್‌ಕೊರ್ಸ್ ಬುಕ್ಕಿಂಗ್‌ ಕೌಂಟರ್‌ನಿಂದ 3.47 ಕೋಟಿ ರೂ. ಸೀಜ್

ಬೆಂಗಳೂರು : ಸಿಸಿಬಿ ಪೊಲೀಸರು ರೇಸ್‌ಕೋರ್ಸ್‌ (Race Course) ಬುಕ್ಕಿಂಗ್‌ ಕೌಂಟರ್‌ ಮೇಲೆ ದಾಳಿ ನಡೆಸಿದ್ದು, ಸೂಕ್ತ ದಾಖಲೆಗಳಿಲ್ಲದ 3.47 ಕೋಟಿ ರೂ. ಹಣವನ್ನು ಜಪ್ತಿ ಮಾಡಿರುವ ಘಟನೆ ಬೆಂಗಳೂರು (Bengaluru) ನಗರದಲ್ಲಿ ನಡೆದಿದೆ .

ಜಿಎಸ್​ಟಿ ಕಟ್ಟದೇ ವಂಚನೆ ಮಾಡಿದ ಆರೋಪ ಹಾಗೂ ನಿಗದಿತ ದರಗಳಿಗಿಂತ ಹೆಚ್ಚಿನ ಬೆಲೆಗೆ ಟಿಕೆಟ್ ಮಾರಾಟ ಮಾಡುತ್ತಿರುವ ಕಾರಣ ರೇಸ್​ಕೋರ್ಸ್ ಬುಕ್ಕಿಂಗ್ ಕೌಂಟರ್ ಮೇಲೆ ಸಿಸಿಬಿ ಪೊಲೀಸರು (CCB Police) ದಾಳಿ ನಡೆಸಿದ್ದಾರೆ.

ತಡರಾತ್ರಿ 1 ಗಂಟೆ ಸುಮಾರಿಗೆ ದಾಳಿ ನಡೆದಿದ್ದು , ದಾಳಿ ವೇಳೆ ದಾಖಲೆಗಳಿಲ್ಲದ 3.47 ಕೋಟಿ ರೂ. ಜಪ್ತಿ ಮಾಡಲಾಗಿದೆ.

ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದ್ದು, 60 ಜನರನ್ನ ವಶಕ್ಕೆ ಪಡೆದು ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.ಭಾರತದ ಅತಿ ಉದ್ದದ ಸಮುದ್ರ ಸೇತುವೆ ‘ಅಟಲ್ ಸೇತು’ ಇಂದು ಲೋಕಾರ್ಪಣೆ

ಸಿಸಿಬಿ ಪೊಲೀಸರು ದಾಳಿ ಸಂದರ್ಭದಲ್ಲಿ ಸಿಕ್ಕ ಹಣಕ್ಕೆ ಸೂಕ್ತ ದಾಖಲೆ ಸಲ್ಲಿಸುವಂತೆ ಸೂಚಿಸಿ , ದಾಖಲೆ ಸಲ್ಲಿಸಲು ವಿಫಲರಾದರೇ ನಿರ್ದೇಶನಾಲಯಕ್ಕೆ (ಇಡಿ) ಮಾಹಿತಿ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Team Newsnap
Leave a Comment

Recent Posts

ರೇವಣ್ಣ ರಿಲೀಸ್ : ಬಿಗ್ ರಿಲೀಪ್

ಐದು ದಿನಗಳ ಜೈಲು ವಾಸಕ್ಕೆ ಅಂತ್ಯ ⁠5 ಲಕ್ಷ ರು ಬಾಂಡ್ , ಎಸ್ ಐಟಿ ತನಿಖೆಗೆ ಸಹಕರಿಸಬೇಕು ಎಂಬ… Read More

May 13, 2024

ನನ್ನನ್ನು ಯಾರು ಅಪಹರಣ ಮಾಡಿಲ್ಲ, ಮಗ ತಪ್ಪು ದೂರು ಕೊಟ್ಟಿದ್ದಾನೆ ಎಂದ ಕಿಡ್ನ್ಯಾಪ್ ಸಂತ್ರಸ್ತೆ

ಬೆಂಗಳೂರು : ಪ್ರಜ್ವಲ್‌ ರೇವಣ್ಣ ವಿಚಾರದ ಕಿಡ್ನ್ಯಾಪ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಕ್ಕೊಂದು ಟ್ವಿಸ್ಟ್‌ ಪಡೆದುಕೊಳ್ಳುತ್ತಲೇ ಇದೆ. ಈ ಕೇಸ್‌ನಲ್ಲಿ ಸಂತ್ರಸ್ತೆ… Read More

May 13, 2024

ಸರಿಯಾದ ಸಮಯಕ್ಕೆ ಆಂಬ್ಯುಲೆನ್ಸ್ ಬಂದಿದ್ದರೆ ಮಂಡ್ಯದ ನಟಿ ಪವಿತ್ರಾ ಸಾಯುತ್ತಿರಲಿಲ್ಲ- ಗೆಳೆಯ ಚಂದ್ರಕಾಂತ್

ಹೈದ್ರಾಬಾದ್ : ನಿಜ ಹೇಳಬೇಕು ಅಂದ್ರೆ ಅಪಘಾವಾದ ಸ್ಥಳಕ್ಕೆ ಆಂಬ್ಯುಲೆನ್ಸ್ ಸುಮಾರು 20 ನಿಮಿಷಗಳ ಕಾಲ ತಡವಾಗಿ ಬಂದಿದ್ದಕ್ಕೆ ಆಕೆ… Read More

May 13, 2024

CBSE 12 ನೇ ತರಗತಿಯ ಫಲಿತಾಂಶ ಪ್ರಕಟ: ಇಲ್ಲಿದೆ ಫಲಿತಾಂಶವನ್ನು ಪರಿಶೀಲಿಸಲು ನೇರ ಲಿಂಕ್

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ( CBSE ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದ್ದು… Read More

May 13, 2024

ರಾಜ್ಯದಾದ್ಯಂತ ಮುಂದಿನ 5 ದಿನ ಭಾರಿ ಮಳೆ

ಬೆಂಗಳೂರು : ಮುಂದಿನ 5 ದಿನ ರಾಜ್ಯದಾದ್ಯಂತ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ… Read More

May 13, 2024

ಕರ್ನೂಲಿನಲ್ಲಿ ಭೀಕರ ರಸ್ತೆ ಅಪಘಾತ: ಮಂಡ್ಯದ ನಟಿ `ಪವಿತ್ರ ಜಯರಾಂ’ ಸಾವು

ಬೆಂಗಳೂರು : ತೆಲುಗಿನ 'ತ್ರಿನಯನಿ' ಧಾರಾವಾಹಿಯಲ್ಲಿ ಜನಪ್ರಿಯರಾಗಿರುವ ಕನ್ನಡತಿ, ಮಂಡ್ಯದ ಹನಕೆರೆ ಪವಿತ್ರ ಜಯರಾಂ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆಂಧ್ರಪ್ರದೇಶದ ಕರ್ನೂಲು… Read More

May 12, 2024