ಬೆಂಗಳೂರು: ಫೆಬ್ರವರಿ 8ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೆಲೆಬ್ರಿಟಿ ಕ್ರಿಕೆಟ್ ಲೀಗ್ (CCL) 11ನೇ ಆವೃತ್ತಿಯ ಉದ್ಘಾಟನೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ನಟ ಕಿಚ್ಚ ಸುದೀಪ್ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಿದರು.
ಇಂದು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಕಿಚ್ಚ ಸುದೀಪ್ ಭೇಟಿ ನೀಡಿ, ಫೆ. 8ರಂದು ನಡೆಯುವ ಸಿಸಿಎಲ್ ಉದ್ಘಾಟನಾ ಸಮಾರಂಭಕ್ಕೆ ಅವರನ್ನು ಆಹ್ವಾನಿಸಿದರು.
ಫೆಬ್ರವರಿ 8 ಮತ್ತು 9ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯ ಕರ್ನಾಟಕ ಮತ್ತು ಹೈದ್ರಾಬಾದ್ ತಂಡಗಳ ನಡುವೆ ನಡೆಯಲಿದೆ.ಇದನ್ನು ಓದಿ –ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದಿನಿಂದ ಬಜೆಟ್ ಪೂರ್ವಭಾವಿ ಸಭೆ
ಈ ಸಂದರ್ಭ ನಿರ್ದೇಶಕ ಅನೂಪ್ ಭಂಡಾರಿ ಸಹ ಉಪಸ್ಥಿತರಿದ್ದರು. ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ಕೂಡ ನಟ ಸುದೀಪ್ ಅವರೊಂದಿಗೆ ತೆರಳಿದರು.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು