June 25, 2026

Newsnap Kannada

The World at your finger tips!

jarakihole

ಸಿ.ಡಿ ಪ್ರಕರಣ : ಬಿ ರಿಪೋರ್ಟ್ ಸಲ್ಲಿಕೆ – ರಮೇಶ್ ಜಾರಕಿಹೊಳಿಗೆ ಬಿಗ್​ ರಿಲೀಫ್

Spread the love

ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಆರೋಪ ಪ್ರಕರಣದ ತನಿಖೆ ನಡೆಸುತ್ತಿದ್ದ ವಿಶೇಷ ತನಿಖಾ ತಂಡ (SIT) ಶುಕ್ರವಾರ ಬಿ.ರಿಪೋರ್ಟ್​ ಸಲ್ಲಿಸಿದೆ.

ಈ ಮೂಲಕ ರಮೇಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಸರ್ಕಾರಿ ಕೆಲಸ ಕೊಡಿಸುವ ಆಮಿಷ ನೀಡಿ ತನ್ನ ಮೇಲೆ‌ ಅತ್ಯಾಚಾರ ಮಾಡಲಾಗಿದೆ ಎಂದು ಯುವತಿಯೊಬ್ಬರು ಗಂಭೀರ ಆರೋಪ ಮಾಡಿದ್ದರು.

ಆರೋಪಕ್ಕೆ ಸಂಬಂಧಿಸಿದಂತೆ ವಿಡಿಯೋ ಕೂಡ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಆರೋಪ ಕೇಳಿಬಂದ ಬೆನ್ನಲ್ಲೇ ರಾಜ್ಯ ಸರ್ಕಾರ ಪ್ರಕರಣದ ವಿಚಾರಣೆಯ ಜವಾಬ್ದಾರಿಯನ್ನು ವಿಶೇಷ ತನಿಖಾ ತಂಡಕ್ಕೆ ನೀಡಿತ್ತು. ತನಿಖೆ ನಡೆಸಿದ ಎಸ್​ಐಟಿ, ಅತ್ಯಾಚಾರ ನಡೆದಿದೆ ಎಂಬುದಕ್ಕೆ ಯಾವುದೇ ಸಾಕ್ಷಿ ಸಿಗದ ಹಿನ್ನಲೆಯಲ್ಲಿ ಇಂದು ಮ್ಯಾಜಿಸ್ಟ್ರೇಟ್ ಕೋರ್ಟ್​ಗೆ ಬಿ.ರಿಪೋರ್ಟ್ ಸಲ್ಲಿಸಿದೆ.

error: Content is protected !!