ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ಮೂವರು ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ.
ಬೆಂಗಳೂರು ಪೋಲಿಸ್ ಕಮಿಷನರ್ ಕಮಲ್ಪಂತ್, ಡಿಸಿಪಿ ಅನುಚೇತ್ ಹಾಗೂ ಕಬ್ಬನ್ಪಾರ್ಕ್ ಇನ್ಸ್ಪೆಕ್ಟರ್ ಮಾರುತಿ ವಿರುದ್ಧ ತನಿಖೆ ನಡೆಸುವಂತೆ ನಗರದ 8ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ರಮೇಶ್ ಜಾರಕಿಹೊಳಿ ಅತ್ಯಾಚಾರ ನಡೆಸಿದ್ದಾರೆ ಎಂದು ಸಂತ್ರಸ್ಥ ಯುವತಿ ದೂರು ನೀಡಿದ್ದರು.
ಕಬ್ಬನ್ಪಾರ್ಕ್ ಪೊಲೀಸರು ಎಫ್ಐಆರ್ ದಾಖಲಿಸದೇ ನಿರ್ಭಯ ಗೈಡ್ಲೈನ್ ಉಲ್ಲಂಘಿಸಿದ್ದಾರೆ ಎಂದು ಜನಾಧಿಕಾರ ಸಂಘರ್ಷ ಪರಿಷತ್ನ ಅಧ್ಯಕ್ಷ ಆದರ್ಶ ಅಯ್ಯರ್ ಪಿಸಿಆರ್ ದಾಖಲಿಸಿದ್ದರು
ಈ ದೂರಿನ ಆಧಾರದ ಮೇಲೆ ಮೂವರು ಅಧಿಕಾರಿಗಳ ತನಿಖೆ ನಡೆಸಲು ನ್ಯಾಯಾಲಯ ಆದೇಶಿಸಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು