ಸಿಡಿ ಪ್ರಕರಣ: ರಮೇಶ್ ಜಾರಕಿಹೊಳಿಗೆ ಹನಿಟ್ರ್ಯಾಪ್ ಮಾಡಿರುವ ಸಾಧ್ಯತೆ : ಬಿ ರಿಪೋರ್ಟ್ ಹಾಕಲು ಸಿದ್ದತೆ

Team Newsnap
1 Min Read

ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರ ಸಿಡಿ ಪ್ರಕರಣವನ್ನು ತನಿಖೆ ನಡೆಸುತ್ತಿರುವ ವಿಶೇಷ ತನಿಖಾದಳದ ಅಧಿಕಾರಿಗಳು, ಸಾಕ್ಷ್ಯಾಧಾರ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ನೀಡಿ ಜಾರಕಿಹೊಳಿಯವರಿಗೆ ಕ್ಲೀನ್ ಚಿಟ್ ನೀಡಲು ಮುಂದಾಗಿದೆ ಎಂದು ಗೊತ್ತಾಗಿದೆ.

ಪ್ರಕರಣ ಸಂಬಂಧ ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲವಂತೆ.‌ ಹೀಗಾಗಿ ಬಿ ರಿಪೋರ್ಟ್ ಸಲ್ಲಿಸಿ ಪ್ರಕರಣಕ್ಕೆ ಫುಲ್ ಸ್ಟಾಪ್ ಹಾಕಲು ಎಸ್ ಐಟಿ ಮುಂದಾಗಿದೆ.

ಸಿಡಿ ತನಿಖೆ ಪೂರ್ಣಗೊಂಡಿದೆ. ಜಾರಕಿಹೊಳಿ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ. ಮಹಿಳೆಯೇ ಪದೇ ಪದೇ ಜಾರಕಿಹೊಳಿಯವರನ್ನು ಸಂಪರ್ಕಿಸಿದ್ದಾರೆ. ಸಾಕಷ್ಟು ಬಾರಿ ದೂರವಾಣಿ ಕರೆ ಮಾಡಿ ಪ್ರಚೋದನೆ ನೀಡುವ ರೀತಿಯಲ್ಲಿ ಮಾತನಾಡಿದ್ದಾರೆ. ಲಭ್ಯವಾಗಿರುವ ವಿಡಿಯೋದಲ್ಲಿ ಮಹಿಳೆಗೆ ಬಲವಂತ ಮಾಡಿರುವ, ದೌರ್ಜನ್ಯ ಎಸಗಿರುವ ಯಾವುದೇ ದೃಶ್ಯಗಳೂ ಕಂಡು ಬಂದಿಲ್ಲ. ಇಬ್ಬರ ಸಹಮತದಿಂದಲೇ ಕ್ರಿಯೆ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಅನೇಕ ಬೆಳವಣಿಗೆ ಗಮನಿಸಿದರೆ ಜಾರಕಿಹೊಳಿಯವರು ಹನಿ ಟ್ರ್ಯಾಪ್’ಗೆ ಒಳಗಾಗಿದ್ದಾರೆಂದು ಹೇಳಲಾಗುತ್ತಿದ್ದು, ಈ ಸಂಬಂಧ ಎಸ್‌ಐಟಿ ಅಧಿಕಾರಿಗಳೂ ನ್ಯಾಯಾಲಯಕ್ಕೆ ಶೀಘ್ರದಲ್ಲಿಯೇ ಬಿ ರಿಪೋರ್ಟ್ ಸಲ್ಲಿಸಲಿದ್ದಾರೆಂದು ತಿಳಿದುಬಂದಿದೆ.

Share This Article
Leave a comment