ಸಿಡಿ ಪ್ರಕರಣದ ತನಿಖೆಯನ್ನು ಎಸ್ ಐ ಟಿ ಸಮರ್ಥವಾಗಿ ನಡೆಸುತ್ತಿದೆ. ಹೀಗಾಗಿ ಈ ಪ್ರಕರಣದ ತನಿಖೆಯನ್ನು ಬೇರೆ ಸಂಸ್ಥೆ ಗೆ ಬದಲಿಸುವುದಿಲ್ಲ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಸ್ಪಷ್ಟವಾಗಿ ಹೇಳಿದರು.
ಧಾರವಾಡದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಬೊಮ್ಮಯಿ, ಎಸ್ ಐ ಟಿ ಸಿಡಿ ತನಿಖೆಯನ್ನು ನಿಸ್ಪಕ್ಷಪಾತ, ನಿಷ್ಠೂರ, ನ್ಯಾಯಸಮ್ಮತ ವಾಗಿ ನಡೆಸುತ್ತಿದೆ. ಈ ಹಂತದಲ್ಲಿ ಮತ್ತೊಂದು ತನಿಖಾ ಸಂಸ್ಥೆಗೆ ವಹಿಸುವುದಿಲ್ಲ ಎಂದು ಹೇಳಿದರು.
ಶಾಲಾ -ಕಾಲೇಜು ಬಂದ್ ನಿರ್ಧಾರ ವಿಲ್ಲ:
ಹೊರ ರಾಜ್ಯಗಳಲ್ಲಿ ಕೋವಿಡ್ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಕ್ರಮಗಳನ್ನು ಕಟ್ಟು ನಿಟ್ಟಾಗಿ ಅನುಸರಿಸಲಾಗುತ್ತಿದೆ. ಶಾಲಾ ಕಾಲೇಜುಗಳ ಬಂದ್ ವಿಚಾರದಲ್ಲಿ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳುತ್ತವೆ ಎಂದರು.
ರಾಜ್ಯದಲ್ಲಿ ಲಾಕ್ ಡೌನ್ ಮಾಡುವ ಬಗ್ಗೆ ಇದುವರೆಗೆ ಚರ್ಚೆ ಆಗಿಲ್ಲ. ಬದಲಿಗೆ ಕೋವಿಡ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದರು.
- ನಿಮ್ಮ ಮನದ ಭಾವನೆಗಳನ್ನು ಅರ್ಥಮಾಡಿಕೊಳ್ಳುವವರೇ ಇಲ್ಲದಾಗ …?
- ಎಳ್ಳು ಬೆಲ್ಲ ತಿಂದು ಅರೋಗ್ಯ ಹೆಚ್ಚಿಸಿಕೊಳ್ಳಿ
- ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
- ಬಿಜೆಪಿಯಿಂದ ಪ್ರತಾಪ್ ಸಿಂಹ ಉಚ್ಛಾಟನೆಗೆ ಆಗ್ರಹ: ಪಕ್ಷ ತೊರೆಯಲಿದ್ದಾರಾ ಮಾಜಿ ಸಂಸದ?
- ಶಾಸಕ ಡಾ. ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ
More Stories
ನಾನು ದೇವರಲ್ಲ, ನಾನೂ ಸಹ ತಪ್ಪು ಮಾಡಿದ್ದೇನೆ: ನಮೋ
ತಿರುಪತಿಯಲ್ಲಿ ಕಾಲ್ತುಳಿತ: 6 ಮಂದಿ ಸಾವು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆ
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ