ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣಕ್ಕೆ ಒಂದು ತಾರ್ಕಿಕ ತಿರುವು ಸಿಗಲಿದೆ.
ಸಿಡಿ ಲೇಡಿ ತಮ್ಮ ವಕೀಲರ ಮೂಲಕ ಇಂದು ಮಧ್ಯಾಹ್ನ 2 .30 ವೇಳೆಗೆ ಮಾಜಿ ಮಂತ್ರಿ ರಮೇಶ್ ವಿರುದ್ಧವೇ ದೂರು ನೀಡುವುದಾಗಿ ಹೇಳಿದ್ದಾಳೆ
ರಾಜ್ಯದ ಲ್ಲಿ ಕಳೆದ 24 ದಿನಗಳಿಂದ ತೀವ್ರ ಸಂಚಲನ ಮೂಡಿಸಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದೆ.
ರಮೇಶ ಜಾರಕಿಹೊಳಿ ವಿರುದ್ಧ ಇಂದೇ ಪ್ರಕರಣ ದಾಖಲಿಸಲು ಸಿಡಿಯಲ್ಲಿರುವ ಯುವತಿ ನಿರ್ಧರಿಸಿದ್ದಾಳೆ. ವಕೀಲ ಜಗದೀಶ್ ಎನ್ನುವವರ ಮೂಲಕ ಮಧ್ಯಾಹ್ನ 2 ಗಂಟೆಗೆ ದೂರು ದಾಖಲಾಗಲಿದೆ ಎಂದು ಹೇಳಿದ್ದಾಳೆ.
ಯುವತಿಯ ಹಸ್ತಾಕ್ಷರದಲ್ಲೇ ದೂರು ದಾಖಲಿಸಲಾಗುವುದು ಎಂದು ಅವಳ ಪರ ವಕೀಲ ಜಗದೀಶ ಸುದ್ದಿಗಾರರಿಗೆ ತಿಳಿಸಿದ್ದಾರೆ
ಒಬ್ಬ ಪ್ರಭಾವಿ ರಾಜಕಾರಣಿ ವಿರುದ್ಧ ದೂರು ದಾಖಲಿಸುವುದು ಸುಲಭವಲ್ಲ. ಪೊಲೀಸರು ಹೇಗೆ ತೆಗೆದುಕೊಳ್ಳುತ್ತಾರೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಹಾಗಾಗಿ ಈ ಮೊದಲು ದೂರು ದಾಖಲಿಸಲು ಸಾಧ್ಯವಾಗಿರಲಿಲ್ಲ ಎಂದು ಜಗದೀಶ್ ತಿಳಿಸಿದ್ದಾರೆ.
ಯುವತಿಯ ದೂರು ನೀಡುವ ನಿರ್ಧಾರ ದಿಂದ ರಮೇಶ ಜಾರಕಿಹೊಳಿ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಹೆಚ್ಚಿದೆ. ಅವರ ಮುಂದಿನ ಹೆಜ್ಜೆ ಕುತೂಹಲ ಮೂಡಿಸಿದೆ.
ಅಲ್ಲದೇ ಯುವತಿ ದೂರು ಸ್ವೀಕರಿಸಿದ ನಂತರ ಪೋಲಿಸರ ಹೆಜ್ಜೆಗಳೂ ಕೂಡ ಯಾವ ದಿಕ್ಕಿನಲ್ಲಿ ಸಾಗುತ್ತವೆ ಎನ್ನುವುದು ಗಮನಾರ್ಹ ಅಂಶವಾಗಿದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ