ಸಿಡಿ ಲೇಡಿ ಶನಿವಾರ ಸಂಜೆ ಮತ್ತೊಂದು ವಿಡಿಯೋ ಬಿಡುಗಡೆ ಮಾಡಿದ್ದಾಳೆ. ಇದು ಆಕೆಯ 5 ನೇ ವಿಡಿಯೋ ಆಗಿದೆ.
ನಮ್ಮ ತಂದೆ- ತಾಯಿ ಕರೆದು ವಿಚಾರಣೆ ಮಾಡಿ ಇಡೀ ಪ್ರಕರಣವನ್ನು ದಾರಿ ತಪ್ಪಿಸುತ್ತಿರುವ ಎಸ್ಐಟಿ ವಿರುದ್ಧ ಯುವತಿ ವಿಡಿಯೋದಲ್ಲಿ ಕಿಡಿಕಾರಿದ್ದಾಳೆ.
ಈ ಪ್ರಕರಣದಲ್ಲಿ ಅನ್ಯಾಯ ಆಗಿರುವುದು ನನಗೆ. ಹೀಗಿರುವಾಗ ನಮ್ಮ ಅಪ್ಪ- ಅಮ್ಮನ ಕರೆದುಕೊಂಡು ಅವರಿಂದ ಇಲ್ಲಸಲ್ಲದ ಹೇಳಿಕೆ ಕೊಡಿಸುತ್ತಿದ್ದಾರೆ. ಅವರ ಮೇಲೆ ಪ್ರಭಾವ ಬೀರಿ ಬ್ಲ್ಯಾಕ್ ಮೇಲ್ ಮಾಡಿ ತಮಗೆ ಬೇಕಾದಂತೆ ಹೇಳಿಕೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾಳೆ.
ನಮ್ಮ ಅಪ್ಪ- ಸಮ್ಮನಿಗೆ ಏನೂ ಗೊತ್ತಿಲ್ಲ. ಹೀಗಿರುವಾಗ ಅವರಿಂದ ಏಕೆ ಹೇಳಿಕೆ ಪಡೆಯುತ್ತಿದ್ದಾರೆ ಅಂತ ಯುವತಿ ಪ್ರಶ್ನೆ ಮಾಡಿದ್ದಾಳೆ.
ನಮ್ಮ ಮನೆಯವರ ಬದಲು ರಮೇಶ್ ಜಾರಕಿಹೊಳಿ ಮನೆಯವರನ್ನು ಕರೆತಂದು ವಿಚಾರಣೆ ಮಾಡಲಿ ಎಂದು ಸಿಡಿ ಲೇಡಿ ಸವಾಲು ಹಾಕಿದ್ದಾಳೆ.
ನಾನು ಬಂದು ಹೇಳಿಕೆ ಕೊಟ್ಟರೆ ಎಸ್ಐಟಿನವರು ನನ್ನಿಂದ ಬೇರೆ ರೀತಿಯ ಹೇಳಿಕೆ ಪಡೆಯುವ ಸಾಧ್ಯತೆ ಇದೆ ಎಂದಿದ್ದಾಳೆ.
ನನಗೆ ತುಂಬಾ ಭಯವಿದೆ.ಈ ಕಾರಣದಿಂದ ನಾನು ನ್ಯಾಯಾಧೀಶರ ಮುಂದೆ ಹೇಳಿಕೆ ಕೊಡುತ್ತೇನೆ ಎಂದು ಯುವತಿ ಹೇಳಿದ್ದಾಳೆ. ಈ ಪ್ರಕರಣ ಮತ್ತಷ್ಟು ಟ್ವಿಸ್ಟ್ ಗಳನ್ನು ಪಡೆಯುತ್ತಿದೆ ಎಂದು ಹೇಳಬಹುದು.
- ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಹುಡುಕಾಟ ಸ್ಥಗಿತ
- ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು
- ಮಂಡ್ಯ: ಕಾವೇರಿ ನದಿಯಲ್ಲಿ ಮುಳುಗಿ ಬಿ.ಇ ವಿದ್ಯಾರ್ಥಿ ದುರ್ಮರಣ
- ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ 89 ಉದ್ಯೋಗಾವಕಾಶ
- ಕೆನರಾ ಬ್ಯಾಂಕ್ನಲ್ಲಿ 60 ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಐತಿಹಾಸಿಕ ಸಾಧನೆ: ಗರಿಷ್ಠ ರನ್ ಹಾಗೂ ಭರ್ಜರಿ ಗೆಲುವು
KPSC ಪರೀಕ್ಷೆಗಳಲ್ಲಿ ಕನ್ನಡ ದೋಷಗಳ ವಿವಾದ – ಮರುಪರೀಕ್ಷೆಗೆ ಪ್ರಬಲ ಒತ್ತಾಯ
ರಾಜ್ಯ ಸರ್ಕಾರದಿಂದ 11 ಡಿವೈಎಸ್ಪಿ (ಸಿವಿಲ್) ಅಧಿಕಾರಿಗಳ ವರ್ಗಾವಣೆ