December 19, 2024

Newsnap Kannada

The World at your finger tips!

ganesha festival,banglore,minister

Celebrating Ganesha festival, if you have the strength, stop it: Sriram Sena Challenge to Jameer

ಗಣೇಶೋತ್ಸವ ಆಚರಿಸುತ್ತೇವೆ, ತಾಕತ್ತಿದ್ದರೆ ತಡೆಯಿರಿ: ಜಮೀರ್‌ಗೆ ಶ್ರೀರಾಮ ಸೇನೆ ಚಾಲೆಂಜ್

Spread the love

ಚಾಮರಾಜಪೇಟೆ ಶಾಸಕ ಜಮೀರ್‌ ವಿರುದ್ಧ ಹಿಂದೂ ಸಂಘಟನೆಗಳು ಕಿಡಿಕಾರಿವೆ ನಾವು ಗಣೇಶೋತ್ಸವ ಆಚರಿಸುತ್ತೇವೆ. ತಾಕತ್ತಿದ್ದರೆ ತಡೆಯಿರಿ ಎಂದು ಸವಾಲು ಹಾಕಿವೆ.

ಶಾಸಕ ಜಮೀರ್‌, ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ. ಆದರೆ ಸ್ವಾತಂತ್ರ್ಯೋತ್ಸವವನ್ನು ನಾವೇ ಅದ್ಧೂರಿಯಾಗಿ ಆಚರಿಸುತ್ತೇವೆ ಎಂದು ಹೇಳಿದ್ದರು.ಇದನ್ನು ಓದಿ –ರಾಜ್ಯ ಕೃಷಿ ಸಚಿವರು ನಾಪತ್ತೆ : ಹುಡುಕಿಕೊಡುವಂತೆ ಕಾಂಗ್ರೆಸ್ ನಾಯಕರ ಮನವಿ

ಜಮೀರ್‌ ಅವರ ಈ ಹೇಳಿಕೆ ಪ್ರಕಟವಾದ ಬೆನ್ನಲ್ಲೇ ಶ್ರೀರಾಮ ಸೇನೆ, ಅದು ಈದ್ಗಾ ಮೈದಾನವಲ್ಲ. ಅಲ್ಲಿರುವುದು ಬಿಬಿಎಂಪಿ ಆಟದ ಮೈದಾನ. ಗಣೇಶೋತ್ಸವವನ್ನು ಅಲ್ಲೇ ಮಾಡುತ್ತೇವೆ. ತಾಕತ್ತಿದ್ದರೆ ತಡೀರಿ ಎಂದು ಪೋಸ್ಟರ್‌ ಹಾಕಿದೆ.

ಜಮೀರ್‌ ಹೇಳಿಕೆ ಬೆನ್ನಲ್ಲೇ ಸಾಮಾಜಿಕ ಜಾಲತಾಣದಲ್ಲಿ ಈಗ ಈ ವಿಚಾರದ ಬಗ್ಗೆ ಬಿಸಿಬಿಸಿ ಚರ್ಚೆಯಾಗುತ್ತಿದೆ.

ಪ್ರಸ್ತುತ ಈದ್ಗಾ ಮೈದಾನದಲ್ಲಿ ವರ್ಷಕ್ಕೆ ಎರಡು ಬಾರಿ ಮುಸ್ಲಿಮರಿಗೆ ಪ್ರಾರ್ಥನೆ ಸಲ್ಲಿಸಲು ಅವಕಾಶವಿದೆ. ಮುಸ್ಲಿಂ ಸಮುದಾಯದ ರಂಜಾನ್, ಬಕ್ರೀದ್‌ ಆಚರಣೆ ಹೊರತುಪಡಿಸಿ ಯಾವುದೇ ಧಾರ್ಮಿಕ ಆಚರಣೆಗಳಿಗೂ ಪೊಲೀಸರಿಂದ ಅವಕಾಶವಿಲ್ಲ. ಆರ್‌ಎಸ್‍ಎಸ್ ಪಥ ಸಂಚಲನ, ಧಾರ್ಮಿಕ ಆಚರಣೆಗಳು, ಇತರೆ ಕಾರ್ಯಕ್ರಮ ಮಾಡಲು ಮುಂದಾದಾಗ ಪೊಲೀಸರು ಅವಕಾಶ ಕೊಟ್ಟಿರಲಿಲ್ಲ.

Copyright © All rights reserved Newsnap | Newsever by AF themes.
error: Content is protected !!