ಸ್ವದೇಶಿ ಕೋವ್ಯಾಕ್ಸಿನ್ ಲಸಿಕೆಯನ್ನು ಎರಡು ಮತ್ತು ಮೂರನೇ ಹಂತದ ಕ್ಲಿನಿಕಲ್ ಟ್ರಯಲ್ನಲ್ಲಿ 2 ರಿಂದ 18 ವರ್ಷ ವಯಸ್ಸಿನವರ ಮೇಲೆ ಪ್ರಯೋಗ ಮಾಡಲು, ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ.
ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಲಸಿಕೆಯನ್ನ 18 ವರ್ಷ ಮೇಲ್ಪಟ್ಟವರಿಗೆ ನೀಡಲು ಈಗಾಗಲೇ ತುರ್ತು ಬಳಕೆ ಅನುಮತಿ ಸಿಕ್ಕಿದೆ.
ಈಗ ಮಕ್ಕಳ ಮೇಲೆ ಲಸಿಕೆಯ ಪರಿಣಾಮಕಾರಿತ್ವವನ್ನ ತಿಳಿದುಕೊಳ್ಳಲು ಟ್ರಯಲ್ ನಡೆಸಲಾಗುತ್ತದೆ.
2ರಿಂದ 18 ವರ್ಷ ನಡುವಿನ ವಯಸ್ಸಿನವರ ಮೇಲೆ ಕೋವ್ಯಾಕ್ಸಿನ್ ಲಸಿಕೆಯ ಸುರಕ್ಷತೆ, ಪ್ರತಿಕ್ರಿಯಾತ್ಮಕತೆ ಮತ್ತು ಪ್ರತಿರೋಧಕ ಶಕ್ತಿಯನ್ನು ತಿಳಿದುಕೊಳ್ಳಲು ಎರಡು/ಮೂರನೇ ಹಂತದ ಪ್ರಯೋಗ ನಡೆಸಲು ಅನುಮತಿ ಕೋರಲಾಗಿತ್ತು.
ಈ ಕುರಿತ ವಿಷಯ ತಜ್ಞರ ಸಮಿತಿ ಈ ಬಗ್ಗೆ ವಿಸ್ತೃತ ಚರ್ಚೆ ನಡೆಸಿ, ಸಂಸ್ಥೆಗೆ ಅನುಮತಿ ನೀಡಿದೆ ಅಂತ ತಿಳಿದುಬಂದಿದೆ.
- ನಂಬುಗೆಯೇ ಇಂಬು
- KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
- Weekly Horoscope: ವಾರದ ಜಾತಕ ನ. 24 ರಿಂದ ನ. 30, 2024.
- ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
- ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಂ ಗೆಲುವು: ಅಧಿಕೃತ ಘೋಷಣೆ ಬಾಕಿ
More Stories
KSRTC : ಪ್ರಯಾಣಿಕರು UPI ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ್ ಗೆ ಭರ್ಜರಿ ಗೆಲುವು
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ