December 22, 2024

Newsnap Kannada

The World at your finger tips!

WhatsApp Image 2022 11 25 at 6.29.20 PM

Center has decided for Har Ghar Dhyan Abhiyan in VV and Degree Colleges. ವಿ ವಿ, ಪದವಿ ಕಾಲೇಜುಗಳಲ್ಲಿ ಹರ್ ಘರ್ ಧ್ಯಾನ್ ಅಭಿಯಾನಕ್ಕೆ ಕೇಂದ್ರದ ನಿರ್ಧಾರ ಮಾಡಲಾಗಿದೆ.

ವಿ ವಿ, ಪದವಿ ಕಾಲೇಜುಗಳಲ್ಲಿ ಹರ್ ಘರ್ ಧ್ಯಾನ್ ಅಭಿಯಾನಕ್ಕೆ ಕೇಂದ್ರದ ನಿರ್ಧಾರ

Spread the love

ಇನ್ನು ಮುಂದೆ ದೇಶದಾದ್ಯಂತ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳಲ್ಲಿ ಧ್ಯಾನ ಮಾಡಿಸುವಂತೆ ಯುಜಿಸಿ ಎಲ್ಲಾ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳು, ವಿದ್ಯಾಸಂಸ್ಥೆಗಳಿಗೆ ಸೂಚನೆ ನೀಡಿದೆ.

ಕರ್ನಾಟಕ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಧ್ಯಾನ ಮಾಡಿಸುವ ಮಹತ್ವದ ನಿರ್ಧಾರ ತೆಗೆದುಕೊಂಡು ಬೆನ್ನಲ್ಲೇ ಕೇಂದ್ರವೂ ಕೂಡ ಇಂತಹ ಮಹತ್ವದ ನಿರ್ಧಾರ ಕೈಗೊಂಡಿದೆ.ಕಾಂಗ್ರೆಸ್ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಹೃದಯಾಘಾತದಿಂದ ಸಾವು

ಯುಜಿಸಿ ಕಾರ್ಯದರ್ಶಿ ಪ್ರೊ. ರಜನೀಶ್ ಜೈನ್‌ರಿಂದ ವಿಶ್ವವಿದ್ಯಾಲಯಗಳು, ಎಲ್ಲಾ ವಿದ್ಯಾಸಂಸ್ಥೆಗಳಿಗೆ ಪತ್ರ ಬರೆಯಲಾಗಿದೆ. 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ನೆನಪಿನಲ್ಲಿ ಈ ಮಹತ್ವದ ನಿರ್ಧಾರವನ್ನು ಕೇಂದ್ರ ಸರ್ಕಾರ ಮಾಡಿದೆ.

ಧ್ಯಾನ ಮಾಡಿಸುವ ನಿಟ್ಟಿನಲ್ಲಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆ ಜೊತೆ ಕೇಂದ್ರ ಸಂಸ್ಕೃತಿ‌ ಇಲಾಖೆ ಒಪ್ಪಂದ ಮಾಡಿಕೊಂಡಿದೆ.

ಬೆಂಗಳೂರಿನ ಅರ್ಟ್ ಆಫ್ ಲಿವಿಂಗ್ ಸಹಯೋಗದಲ್ಲಿ ವಿಶ್ವವಿದ್ಯಾಲಯಗಳು, ಪದವಿ ಕಾಲೇಜುಗಳಲ್ಲಿ ಹರ್ ಘರ್ ಧ್ಯಾನ್ ಅಭಿಯಾನ ನಡೆಸಲು ನಿರ್ಧಾರ ಮಾಡಲಾಗಿದೆ.

Copyright © All rights reserved Newsnap | Newsever by AF themes.
error: Content is protected !!