December 22, 2024

Newsnap Kannada

The World at your finger tips!

central government , job , application

ಕೇಂದ್ರ ಮೀಸಲು ಪೊಲೀಸ್ ಪಡೆ: 9,223 ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

Spread the love

ಕೇಂದ್ರ ಮೀಸಲು ಪೊಲೀಸ್ ಪಡೆಯಲ್ಲಿ 9223 ಕಾನ್‌ಸ್ಟೇಬಲ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಹತೆ ಮತ್ತು ಆಗಸ್ಟ್‌ 1,2023ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕಾನ್‌ಸ್ಟೇಬಲ್‌ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,700/- ರಿಂದ 69,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿದಾರರು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್‌ ಮೂಲಕ ಪಾವತಿಸಬೇಕಿರುತ್ತದೆ.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ ಮಹಿಳಾ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆನ್‌ಲೈನ್‌ ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಏಪ್ರಿಲ್‌ 25,2023ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.ವಾಹನ ಸವಾರರು ರಿಯಾಯಿತಿ ದರದಲ್ಲಿ ದಂಡ ಕಟ್ಟಲು ಎರಡು ದಿನ ಬಾಕಿ

#centralgovernmentjob #centralReservePoliceForce #ConstablePost #jobApplication #governmentJob #JobAlert #Jobcall #breakingnews #india #thenewsnap

Copyright © All rights reserved Newsnap | Newsever by AF themes.
error: Content is protected !!