- ಅ. 10ರೊಳಗೆ ಭೇಟಿ: ಸಚಿವ ಚೆಲುವರಾಯಸ್ವಾಮಿ ಮಾಹಿತಿ
ಕಲಬುರಗಿ : ರಾಜ್ಯದ ಬರಗಾಲ ಪರಿಸ್ಥಿತಿ ಅಧ್ಯಯನ ಮಾಡಲು ಕೇಂದ್ರದ ಮೂರು ತಂಡಗಳು ಮುಂದಿನ ವಾರದಲ್ಲಿ ಆಗಮಿಸುತ್ತಿವೆ ಎಂದು ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೃಷಿ ಇಲಾಖೆಯ ವಿಭಾಗೀಯ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ರಾಜ್ಯದ 195 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಿದ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಅರಿಯಲು ಕೇಂದ್ರ ಬರ ಅಧ್ಯಯನ ತಂಡಗಳನ್ನು ಕಳುಹಿಸುವುದಾಗಿ ಮಾಹಿತಿ ಕಳುಹಿಸಿದೆ. ಅಕ್ಟೋಬರ್ 10 ರೊಳಗೆ ತಂಡಗಳು ಆಗಮಿಸಲಿವೆ ಎಂದು ಅವರು ತಿಳಿಸಿದರು.ಗಲಭೆಕೋರರ ವಿರುದ್ಧ ಕಠಿಣ ಕ್ರಮ
ಹೆಚ್ಚಿನ ಪ್ರಮಾಣದಲ್ಲಿ ಬರಗಾಲವಿದೆ. ಬೆಳೆ ಹಾನಿ ಸಮೀಕ್ಷೆ ನಡೆದಿದ್ದು, ಈಗಾಗಲೇ ಶೇ. 80ರಿಂದ 90 ರಷ್ಟು ಬೆಳೆ ಹಾನಿ ಸಮೀಕ್ಷೆಯಾಗಿದೆ. ತಂಡಗಳು ಆಗಮಿಸುವ ಹೊತ್ತಿಗೆ ಸಮೀಕ್ಷೆ ಪೂರ್ಣಗೊಂಡು ವರದಿ ಅಂತೀಮಗೊಳ್ಳಲಿದೆ. ಪ್ರಾಥಮಿಕ ವರದಿ ಪ್ರಕಾರ ಈಗಾಗಲೇ 40 ಲಕ್ಷ ಹೆಕ್ಟೇರ್ ದಲ್ಲಿ ಸುಮಾರು 28 ಸಾವಿರ ಕೋ.ರೂ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ ಎಂದು ವಿವರಣೆ ನೀಡಿದರು.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ