ಮೇ 20, 21 ರಂದು ಸಿಇಟಿ ಪರೀಕ್ಷೆ – ಪ್ರವೇಶಪತ್ರ ಡೌನ್‌ಲೋಡ್ ಸೌಲಭ್ಯ

Team Newsnap
1 Min Read

ಬೆಂಗಳೂರು: ಎಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರ್ನರಿ, ಬಿ.ಎಸ್ಸಿ (ನರ್ಸಿಂಗ್) ಮುಂತಾದ ವೃತ್ತಿಪರ ಕೋರ್ಸುಗಳಿಗೆ ಮೇ 20 ಮತ್ತು 21ರಂದು ಸಿಇಟಿ ಪರೀಕ್ಷೆ ನಡೆಯಲಿದೆ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ಗೆ ಹೋಗಿ, ಪ್ರವೇಶಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು.

ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ಈ ವಿಷಯ ತಿಳಿಸಿ, ಅಭ್ಯರ್ಥಿಗಳು ಸಿಇಟಿ ಸಂಬಂಧ ನೀಡಿರುವ ಸೂಚನೆಗಳನ್ನು ಕೂಡ ಸರಿಯಾಗಿ ಪಾಲಿಸಬೇಕು ಎಂದಿದ್ದಾರೆ.ಮೂರು‌ ದಿನಗಳ ಕಾಲ ರಾಜ್ಯದಲ್ಲಿ ಮದ್ಯಪಾನ ನಿಷೇಧ : ಅಬಕಾರಿ ಇಲಾಖೆ ಆದೇಶ

ಜತೆಗೆ, ಗಡಿನಾಡು ಮತ್ತು ಹೊರನಾಡು ಕನ್ನಡ ವಿದ್ಯಾರ್ಥಿಗಳಿಗೆ ಮೇ 22ರಂದು ಕನ್ನಡ ಪರೀಕ್ಷೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Share This Article
Leave a comment