ನಾಳೆಯಿಂದ CET ಪರೀಕ್ಷೆ: ಸಕಲ ರೀತಿಯಲ್ಲೂ ಸಜ್ಜು-ಡಾ ಅಶ್ವಥ್ ನಾರಾಯಣ

Team Newsnap
3 Min Read
Sri Ram Deva Betta Project can't be stopped: Minister Ashwath Narayan ಶ್ರೀರಾಮ ದೇವರ ಬೆಟ್ಟ ಯೋಜನೆ ತಡೆಯಲು ಸಾಧ್ಯವಿಲ್ಲ: ಸಚಿವ ಅಶ್ವತ್ಥ್‌ ನಾರಾಯಣ್

ರಾಜ್ಯಾದ್ಯಂತ ನಾಳೆಯಿಂದ ಮೂರು ದಿನಗಳ ಕಾಲ CET ಪರೀಕ್ಷೆಗಳು ನಡೆಯಲಿವೆ. ಜೂನ್ 16, 17, 18 ರಂದು 3 ದಿನ ನಡೆಯಲಿದೆ ಸಿಇಟಿ ಪರೀಕ್ಷೆ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ ಅಶ್ವತ್ಥ್ ನಾರಾಯಣ ತಿಳಿಸಿದರು

486 ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ. ಬೆಂಗಳೂರಿನಲ್ಲಿ 87 ಕೇಂದ್ರ, ಇತರೆ ಜಿಲ್ಲೆಗಳಲ್ಲಿ 399 ಕೇಂದ್ರಗಳ ನಿಗದಿಯಾಗಿದೆ.

ಕಳೆದ ವರ್ಷಕ್ಕಿಂದ ಈ ಬಾರೀ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಒಟ್ಟು 486 ವೀಕ್ಷಕರು, 972 ವಿಶೇಷ ಜಾಗೃತ ದಳದ ಸದಸ್ಯರು, 486 ಪ್ರಶ್ನೆಪತ್ರಿಕೆ ಪಾಲಕರು, ಸುಮಾರು 9600 ಕೊಠಡಿ ಮೇಲ್ವಿಚಾರಕರು ಸೇರಿದಂತೆ ಒಟ್ಟಾರೆ 20,483 ಸಿಬ್ಬಂದಿಗಳು ಪರೀಕ್ಷಾ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ. ಇದನ್ನು ಓದಿ – ದಕ್ಷಿಣ ಪದವೀಧರ ಕ್ಷೇತ್ರ : ಇನ್ನೂ 49 ಸಾವಿರ ಮತ ಬಾಕಿ – ನಾಳೆ ಬೆಳಿಗ್ಗೆ ತನಕವೂ ಎಣಿಕೆ ಕಾರ್ಯ

ಹೊರನಾಡು, ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆ ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಭಾಷೆ ಪರೀಕ್ಷೆ ನಡೆಯಲಿದೆ.

ಪರೀಕ್ಷೆಯನ್ನು ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ನಡೆಯಲಿದೆ. ಕನ್ನಡ ಭಾಷೆ ಪರೀಕ್ಷೆಗೆ ಒಟ್ಟು 1,708 ಅಭ್ಯರ್ಥಿಗಳು ನೊಂದಣಿ ಮಾಡಿಕೊಂಡಿದ್ದಾರೆ. ಸಿಇಟಿ ಪರೀಕ್ಷೆ ನಡೆದ ಒಂದು ತಿಂಗಳಲ್ಲಿ ಫಲಿತಾಂಶ ಪ್ರಕಟವಾಗಿದೆ ಎಂದು ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ. ಇದನ್ನು ಓದಿ – ರಾಷ್ಟ್ರಪತಿ ಚುನಾವಣೆ, ಮಮತಾ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಬಾಗಿ.

ವಿದ್ಯಾರ್ಥಿ ಸಂಖ್ಯೆ ಎಷ್ಟು ?

  • 2,16,525 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ
  • ಯಾವುದೇ ಧರ್ಮ ಸೂಚಕ ವಸ್ತ್ರ ಧರಿಸಿ ಸಿಇಟಿ ಪರೀಕ್ಷೆಗೆ ಬರುವಂತಿಲ್ಲ
  • ಹಿಜಾಬ್ ಧರಿಸುವಂತಿಲ್ಲ ಎಂದು ಪರೀಕ್ಷಾ ಪ್ರಾಧಿಕಾರ ಸೂಚನೆಯನ್ನು ನೀಡಿದೆ.

ಆಭರಣಗಳು ಧರಿಸುವಂತಿಲ್ಲ, ಮೊಬೈಲ್, ಬ್ಲೂಟೂತ್, ಕೈಗಡಿಯಾರ ಸೇರಿದಂತೆ ಎಲೆಕ್ಟ್ರಾನಿಕ್ ಉಪಕರಣಗಳು ನಿಷೇಧ ವಿಧಿಸಲಾಗಿದ್ದು. 2,16,525 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದು ಪರೀಕ್ಷೆಯನ್ನು ಬರೆಯಲಿದ್ದಾರೆ. KCET ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದ್ದು, ಅವುಗಳನ್ನೆಲ್ಲ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಚಿವರು ಮನವಿ ಮಾಡಿದ್ದಾರೆ.* ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು ಬರಬೇಕು.ಓಎಂಆರ್ ಉತ್ತರ ಪತ್ರಿಕೆಯಲ್ಲಿ ತಮ್ಮ ಹೆಸರು, ಸಿಇಟಿ ಸಂಖ್ಯೆ, ಪ್ರಶ್ನೆ ಪತ್ರಿಕೆಯ ವರ್ಶನ್ ಕೋಡ್ ನಮೂದಿಸಬೇಕು.

  • ಮೊದಲ ಗಂಟೆ ಬಾರಿಸಲಿರುವ ನಿಗದಿತ ಅವಧಿಗಿಂತಲೂ ಅರ್ಧ ಗಂಟೆ ಮುಂಚೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.
  • ವಿದ್ಯಾರ್ಥಿಗಳು ತಮ್ಮ ಪ್ರವೇಶಪತ್ರ (ಅಡ್ಮಿಶನ್ ಟಿಕೆಟ್) ಮತ್ತು ಯಾವುದಾದರೂ ಒಂದು ಸೂಕ್ತ ಗುರುತಿನ ಪತ್ರವನ್ನು ತರಬೇಕು (ಕಾಲೇಜಿನ ಗುರುತುಪತ್ರ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಆಧಾರ್/ಪ್ಯಾನ್ ಕಾರ್ಡ್, ದ್ವಿತೀಯ ಪಿಯುಸಿ/12ನೇ ತರಗತಿಯ ಪ್ರವೇಶ ಪತ್ರ ಇತ್ಯಾದಿಗಳ ಪೈಕಿ ಒಂದು).
  • ಯಾವುದೇ ತರಹದ ಕೈಗಡಿಯಾರಗಳನ್ನು ಕಟ್ಟಿಕೊಂಡು ಬರುವಂತಿಲ್ಲ.
  • ಟ್ಯಾಬ್, ಮೊಬೈಲ್, ಕ್ಯಾಲ್ಕುಲೇಟರುಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವಂತಿಲ್ಲ ಎಂದು ತಿಳಿಸಲಾಗಿದೆ

CET ಪರೀಕ್ಷೆಗೆ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿಪರೀಕ್ಷಾ ಕೇಂದ್ರಗಳ ಬಳಿ ಜಾಮರ್, ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗುತ್ತದೆ. ಪರೀಕ್ಷಾ ಕೇಂದ್ರದ ಸುತ್ತಲು 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವುದು ಕಡ್ಡಾಯ ಮಾಡಲಾಗಿದೆ.16-6-22ರಂದು-10.30 ರಿಂದ 11.30 – ಜೀವಶಾಸ್ತ್ರ

  1. 16-6-22 ರಂದು 2.30 ರಿಂದ 3.30-ಗಣಿತ
  2. 17-6-22ರಂದು 10.30 ರಿಂದ 11.30- ಭೌತಶಾಸ್ತ್ರ
  3. 17-6-22ರಂದ 2.30 ರಿಂದ 3.30-ರಸಾಯನಶಾಸ್ತ್ರ
  4. 18-6-22ರಂದು-10.30 ರಿಂದ 11.30-ಹೊರನಾಡ ಕನ್ನಡಿಗರಿಗೆ, ಕನ್ನಡ ಪರೀಕ್ಷೆ

ಮಲ್ಲೇಶ್ವರದ ಕರ್ನಾಟಕ ಪರೀಕ್ಷಾ ಪ್ರಧಿಕಾರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಈ ಬಾರೀ ಒಟ್ಟು 2,16,525 ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ.

CET

Share This Article
Leave a comment