Main News

2020-2021ನೇ ಸಾಲಿನ ಸಿಇಟಿ ಫಲಿತಾಂಶ ನಾಳೆ ಪ್ರಕಟ

2020-2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ನಾಳೆ ಪ್ರಕಟವಾಗಲಿದೆ.

ಆಗಸ್ಟ್ 28,29 ಮತ್ತು 30ರಂದು ನಡೆದಿದ್ದ ಸಿಇಟಿ ಪರೀಕ್ಷೆಗೆ ಈ ಬಾರಿ 2,01,834 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.

ಇಂಜಿನಿಯರಿಂಗ್, ಯೋಗ, ನ್ಯಾಚುರೋಪತಿ, ಬಿ-ಫಾರ್ಮಾ, ಡಿ-ಫಾರ್ಮಾ, ವೆಟರ್ನರಿ & ಫಾರ್ಮ್ ಸೈನ್ಸ್​ ಸೇರಿದಂತೆ ಇತರೆ ಕೋರ್ಸ್​ಗಳಿಗೆ ಪರೀಕ್ಷೆ ನಡೆದಿತ್ತು.

ಗಣಿತಶಾಸ್ತ್ರ ಪರೀಕ್ಷೆಗೆ 92.90%, ಜೀವಶಾಸ್ತ್ರ ಪರೀಕ್ಷೆಗೆ 80.48%,ರಸಾಯನಶಾಸ್ತ್ರ ಪರೀಕ್ಷೆಗೆ 95.88% , ಭೌತಶಾಸ್ತ್ರ ಪರೀಕ್ಷೆಗೆ 95.91% ರಷ್ಟು ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದಿದ್ದಾರೆ.

ನಾಳೆ ಮಧ್ಯಾಹ್ನ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಸಿಇಟಿ ಫಲಿತಾಂಶ ಪ್ರಕಟ ಮಾಡಲಿದ್ದಾರೆ.

ವಿದ್ಯಾರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್​ಸೈಟ್ kea.kar.nic.in ನಲ್ಲಿ‌ ಫಲಿತಾಂಶ ವೀಕ್ಷಿಸಬಹುದು.

Team Newsnap
Leave a Comment
Share
Published by
Team Newsnap

Recent Posts

ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ… Read More

May 16, 2024

ಎಚ್ ಡಿ ರೇವಣ್ಣನಿಗೆ ನಾಳೆ ತನಕ ಮಧ್ಯಂತರ ಜಾಮೀನು ನೀಡಿದ ನ್ಯಾಯಾಲಯ

ಬೆಂಗಳೂರು : ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರಾಗಿದೆ. ಈ ಪ್ರಕರಣದಲ್ಲಿ… Read More

May 16, 2024

ಹಾಸನ : ಮೀನು ಹಿಡಿಯಲು ಹೋಗಿದ್ದ ಒಂದೇ ಗ್ರಾಮದ 4 ಮಕ್ಕಳು ಜಲ ಸಮಾಧಿ

ಹಾಸನ : ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ನಾಲ್ಕು ಮಕ್ಕಳು ಜಲ ಸಮಾಧಿ ಆದ ಘಟನೆ ಆಲೂರು ತಾಲೂಕಿನ, ತಿಮ್ಮನಹಳ್ಳಿ… Read More

May 16, 2024

ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಆಪ್ತರ… Read More

May 16, 2024

ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಕ್ಕೆ ಸಂಚು; ಮೈಸೂರಿನಲ್ಲಿ ಶಂಕಿತ ಉಗ್ರನನ್ನು ಬಂಧಿಸಿದ ಎನ್‌ಐಎ

ಬೆಂಗಳೂರು : ಇಸ್ರೇಲ್ ರಾಯಭಾರ ಕಚೇರಿ ಸ್ಫೋಟಿಸಲು ಸಂಚು ರೂಪಿಸಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಂಕಿತ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)… Read More

May 15, 2024

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಭೀಕರ ಹತ್ಯೆ

ಹುಬ್ಬಳ್ಳಿ : ಇಂದು ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದ್ದಕ್ಕೆ ಮನೆಗೆ ನುಗ್ಗಿ ಯುವತಿಗೆ ಚಾಕುವಿನಿಂದ ಮನಬಂದಂತೆ ಇರಿದು ಹತ್ಯೆಗೈದಿರುವ ಘಟನೆ… Read More

May 15, 2024