ಮಂಡ್ಯ : ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ಪಕ್ಷದ ಕಾರ್ಯಕರ್ತರು ಮಂಡ್ಯದಲ್ಲಿ ಸೋಮವಾರ ಚಡ್ಡಿ ಮೆರವಣಿಗೆ ನಡೆಸಿದರು.
ಮಂಡ್ಯದ ಬಿಜೆಪಿ ಕಚೇರಿಯಿಂದ ಕಾರ್ಯಕರ್ತರು ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಡಾ. ಅಶ್ವಥ್ ನಾರಾಯಣ್ ನೇತೃತ್ವದಲ್ಲಿ ರಾಸುಗಳ ಜೊತೆ ಚಡ್ಡಿ ಮೆರವಣಿಗೆ ಹೊರಟು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.
ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಧರಣಿ ಸ್ಥಳಕ್ಕೆ ತೆರಳಿದ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು.
ಯಾವುದೇ ಆದೇಶ ಇಲ್ಲದಿದ್ದರೂ ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡುಗಡೆ ಮಾಡಿ ಕಾಂಗ್ರೆಸ್ ಸರ್ಕಾರ ದುಡುಕಿನ ನಿರ್ಧಾರ ಕೈಗೊಂಡಿದ್ದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ಧೋರಣೆಯಿಂದ ಜಲಾಶಯಗಳಲ್ಲಿ ನೀರು ಬರೆದಾಗುತ್ತಿದೆ ಎಂದು ಆರೋಪಿಸಿದರು.
ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ, ಸುಪ್ರೀಂ ಕೋರ್ಟ್ ನಲ್ಲಿ ವಾಸ್ತವ ಸ್ಥಿತಿ ವಿಚಾರ ಮುಂದಿಟ್ಟು ವಾದ ಮಂಡನೆ ಮಾಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ, ಪ್ರಾಧಿಕಾರದ ಸಭೆಯಲ್ಲಿ ರಾಜ್ಯದ ಅಧಿಕಾರಿಗಳು ಖುದ್ದು ಹಾಜರಾಗದೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾಹಿತಿ ನೀಡಿರುವುದು ಸರ್ಕಾರದ ವೈಫಲ್ಯತೆಯನ್ನು ಎತ್ತಿ ತೋರಿಸಿದೆ ಎಂದು ದೂರಿದರು.
ತಮಿಳುನಾಡಿಗೆ ಮೂರನೇ ಬೆಳೆಗೆ ಸಾಕಾಗುವಷ್ಟು ಸರ್ಕಾರ ನೀರು ಬಿಡುತ್ತಿದೆ, ರೈತರಿಗೆ ನಿರಂತರ ಅನ್ಯಾಯ ಮಾಡುತ್ತಿದೆ. ನೀರು ಹರಿಸುತ್ತಿದ್ದರೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಲಿದೆ, ಪರಿಸ್ಥಿತಿಯನ್ನು ಅರಿತು ತಕ್ಷಣ ನೀರು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.ಬಾಲಿವುಡ್ ಪರಿಣಿತಿ ಚೋಪ್ರಾ – ರಾಘವ್ ಚಡ್ಡಾ ಮದುವೆ ಸಂಭ್ರಮ
ಬಿಜೆಪಿ ಜಿಲ್ಲಾಧ್ಯಕ್ಷ ಎಸ್ ಉಮೇಶ್. ಸಿದ್ದರಾಮಯ್ಯ,ಸಚ್ಚಿದಾನಂದ, ಡಾ. ಇಂದ್ರೇಶ್, ಕೆ.ಕೃಷ್ಣಪ್ಪ, ಸಾದೊಳಲು ಸ್ವಾಮಿ ಚಡ್ಡಿ ಮೆರವಣಿಗೆ ನೇತೃತ್ವವನ್ನು ವಹಿಸಿದ್ದರು.
More Stories
ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
ಓದಿನ ಮಹತ್ವ