ಶಿವಮೊಗ್ಗದಲ್ಲಿ ಈ ಯುವತಿ ಬಿಇಡಿ ಓದುತ್ತಿದ್ದಳು. 5 ವರ್ಷದ ಹಿಂದೆ ದಾವಣಗೆರೆಯಲ್ಲಿ ಉಮೇಶ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.
ದಾವಣಗೆರೆಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ ಸಹಾಯ ಕೇಳಿದ್ದೆವು. ಆಗ ದಾವಣಗೆರೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ . ಉಮೇಶ್ ವಿರುದ್ಧ ಚಿತ್ರದುರ್ಗ ನಗರದ ಮಹಿಳಾ ಠಾಣೆ ಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.ಮಾಗಡಿಯ ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ
ಆತ ಕರೆದಾಗ ಹೋಗದಿದ್ದಕ್ಕೆ ಶಿವಮೊಗ್ಗಕ್ಕೆ ಬಂದು ಬಲತ್ಕಾರ ಮಾಡಿದ್ದಾರೆ. ಐದು ಸಲ ಯುವತಿಗೆ ಗರ್ಭಪಾತ ಮಾಡಿಸಿರುವ ಆರೋಪವೂ ಕೇಳಿಬಂದಿದೆ.
ಸಿಪಿಐ ಉಮೇಶ್‍ಗೆ ಈಗಾಗಲೇ ಇಬ್ಬರು ಹೆಂಡತಿಯರಿದ್ದಾರೆ. 3ನೇ ಪತ್ನಿಯಾಗಿ ಇರುವಂತೆ ಸಿಪಿಐ ಉಮೇಶ್ ಒತ್ತಡ ಹೇರಿದ್ದಾನೆ. ದಾವಣಗೆರೆಯ ನಿವೇಶನ ನಿನಗೆ ಸಿಗದಂತೆ ಮಾಡುತ್ತೇನೆ. ನಿಮ್ಮ ತಂದೆ-ತಾಯಿಯ ಬದುಕು ಬೀದಿಗೆ ತರುತ್ತೇನೆಂದು ಪ್ರಾಣ ಬೆದರಿಕೆ ಹಾಕಿರುವುದಾಗಿ ಯುವತಿ ಆರೋಪಿಸಿದ್ದಾಳೆ.
ಸಿಪಿಐ ವಿರುದ್ಧ ಕಲಂ 376 ಕ್ಲಾಸ್ (2)(ಞ)(ಟಿ), 323 (ಗಾಯಗೊಳಿಸುವುದು), 504 (ಉದ್ದೇಶಪೂರ್ವಕ ಅವಮಾನ), 506 (ಅಪರಾಧ ಬೆದರಿಕೆ) ಐಪಿಸಿ ಅಡಿ ಪ್ರಕರಣ ದಾಖಲು ಮಾಡಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು