ಚಳ್ಳಕೆರೆ ಸಿಪಿಐ ಉಮೇಶ್ ಯುವತಿ ಮೇಲೆ ಅತ್ಯಾಚಾರ ದೂರು : ಸಿಪಿಐ ನಾಪತ್ತೆ

Team Newsnap
1 Min Read
Challakere CPI Umesh raped young woman: CPI missing ಚಳ್ಳಕೆರೆ ಸಿಪಿಐ ಉಮೇಶ್ ಯುವತಿ ಮೇಲೆ ಅತ್ಯಾಚಾರ ದೂರು : ಸಿಪಿಐ ನಾಪತ್ತೆ

ಸೋದರ ಮಾವನ ಮಗನೂ ಆಗಿರುವ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ ಉಮೇಶ್ ವಿರುದ್ಧ ಯುವತಿಯೊಬ್ಬಳು ಅತ್ಯಾಚಾರದ ದೂರು ನೀಡಿದ್ದಾಳೆ ಪ್ರಕರಣ ದಾಖಲಾದ ಬಳಿಕ ಸಿಪಿಐ ಜಿ.ಬಿ.ಉಮೇಶ್ ನಾಪತ್ತೆಯಾಗಿದ್ದಾನೆ.

ಶಿವಮೊಗ್ಗದಲ್ಲಿ ಈ ಯುವತಿ ಬಿಇಡಿ ಓದುತ್ತಿದ್ದಳು. 5 ವರ್ಷದ ಹಿಂದೆ ದಾವಣಗೆರೆಯಲ್ಲಿ ಉಮೇಶ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ದಾವಣಗೆರೆಯಲ್ಲಿ ನಿವೇಶನದ ಸಮಸ್ಯೆ ಹಿನ್ನೆಲೆ ಸಹಾಯ ಕೇಳಿದ್ದೆವು. ಆಗ ದಾವಣಗೆರೆಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದಾರೆ ಎಂದು ಯುವತಿ ಆರೋಪಿಸಿದ್ದಾಳೆ . ಉಮೇಶ್ ವಿರುದ್ಧ ಚಿತ್ರದುರ್ಗ ನಗರದ ಮಹಿಳಾ ಠಾಣೆ ಯಲ್ಲಿ ಪ್ರಕರಣ ದಾಖಲಿಸಿದ್ದಾಳೆ.ಮಾಗಡಿಯ ಬಂಡೇಮಠದ ಬಸವಲಿಂಗ ಸ್ವಾಮೀಜಿ ಆತ್ಮಹತ್ಯೆ

ಆತ ಕರೆದಾಗ ಹೋಗದಿದ್ದಕ್ಕೆ ಶಿವಮೊಗ್ಗಕ್ಕೆ ಬಂದು ಬಲತ್ಕಾರ ಮಾಡಿದ್ದಾರೆ. ಐದು ಸಲ ಯುವತಿಗೆ ಗರ್ಭಪಾತ ಮಾಡಿಸಿರುವ ಆರೋಪವೂ ಕೇಳಿಬಂದಿದೆ.

ಸಿಪಿಐ ಉಮೇಶ್‍ಗೆ ಈಗಾಗಲೇ ಇಬ್ಬರು ಹೆಂಡತಿಯರಿದ್ದಾರೆ. 3ನೇ ಪತ್ನಿಯಾಗಿ ಇರುವಂತೆ ಸಿಪಿಐ ಉಮೇಶ್ ಒತ್ತಡ ಹೇರಿದ್ದಾನೆ. ದಾವಣಗೆರೆಯ ನಿವೇಶನ ನಿನಗೆ ಸಿಗದಂತೆ ಮಾಡುತ್ತೇನೆ. ನಿಮ್ಮ ತಂದೆ-ತಾಯಿಯ ಬದುಕು ಬೀದಿಗೆ ತರುತ್ತೇನೆಂದು ಪ್ರಾಣ ಬೆದರಿಕೆ ಹಾಕಿರುವುದಾಗಿ ಯುವತಿ ಆರೋಪಿಸಿದ್ದಾಳೆ.

ಸಿಪಿಐ ವಿರುದ್ಧ ಕಲಂ 376 ಕ್ಲಾಸ್ (2)(ಞ)(ಟಿ), 323 (ಗಾಯಗೊಳಿಸುವುದು), 504 (ಉದ್ದೇಶಪೂರ್ವಕ ಅವಮಾನ), 506 (ಅಪರಾಧ ಬೆದರಿಕೆ) ಐಪಿಸಿ ಅಡಿ ಪ್ರಕರಣ ದಾಖಲು ಮಾಡಲಾಗಿದೆ.

Share This Article
Leave a comment